ಹಾವೇರಿ: ಹಾವೇರಿ ರಾಕ್‌ಸ್ಟಾರ್, ಅನ್ನದಾತ, ಜನನಾಯಕ, ಘಟಸರ್ಪ, ಇತಿಹಾಸಕಾರ, ಮಿಡಿ ನಾಗರ ಸೇರಿದಂತೆ ಹತ್ತು ಹಲವು ಘಟಾನುಘಟಿಗಳು ಗತ್ತು ಗಮ್ಮತ್ತಿನೊಂದಿಗೆ ಆಖಾಡಕ್ಕಿಳಿದಿದ್ದರು. ಇವರನ್ನು ನೋಡಲೆಂದೇ ಸಾವಿರಾರು ಜನರು ಜಮಾಯಿಸಿದ್ದರು. ಅಖಾಡದಲ್ಲಿ ಇವರ ಓಟ ನೋಡುಗರನ್ನು ರೋಮಾಂಚನಗೊಳಿಸಿತು.
Advertisement
ಅಷ್ಟಕ್ಕೂ ಇವರು ಓಟಗಾರರಲ್ಲ, ಕ್ರೀಡಾಪಟುಗಳೂ ಅಲ್ಲ. ಇವರೆಲ್ಲ ಸ್ಪರ್ಧೆಗೆ ಬಂದಿದ್ದ ಹೋರಿಗಳು(ಎತ್ತುಗಳು).. ಝಗಮಗಿಸುವ ವಸ್ತ್ರಾಲಂಕಾರ, ಹೂ ಹಾರ, ಮಿಂಚುವ ಝರಿ ಹಾರ, ಕೊಡುಗಳಿಗೆ ರಿಬ್ಬನ್, ಬಲೂನ್‌ಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದ್ದ ಹೋರಿಗಳು ಛಂಗನೆ ಜಿಗಿದು ದಿಕ್ಕೆಟ್ಟು ಓಡಿದಾಗ ಇತ್ತ ನೆರೆದ ಜನರಲ್ಲಿ, ಸಿಳ್ಳೆ ಕೇಕೆ ಹರ್ಷೋದ್ಗಾರ ಮುಗಿಲುಮುಟ್ಟುತ್ತಿತ್ತು.
Related Articles
ಸಿಗದೇ ಛಂಗನೇ ಜಿಗಿದು…ಭರ್ರನೇ ಓಡಿದಾಗ ಅದರ ಮಾಲೀಕ ರೈತನಿಗಾಗುವ ಸಂತಸ ಅಷ್ಟಿಷ್ಟಲ್ಲ.
Advertisement
ಶೌರ್ಯದ ಪ್ರತೀಕವಾಗಿ ಬೆದರಿಸುವ ಕೊಬ್ಬರಿ ಹೋರಿ ಸ್ಪರ್ಧೆ ಅಷ್ಟೇ ಅಪಾಯಕಾರಿ ಆಟವೂ ಆಗಿದೆ. ಆದರೂ ದೀಪಾವಳಿ ಪಾಡ್ಯದಿಂದ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಯಾವುದೇ ಅಡೆತಡೆಯಿಲ್ಲದೇ ಸಂಭ್ರಮದಿಂದ ನಡೆಯಿತು. ಹೋರಿಯೊಂದಿಗೆ ಕಾದಾಡಿ ಕೊರಳಲ್ಲಿ ಕಟ್ಟಿದ ಕೊಬ್ಬರಿ ಹರಿಯಲು, ಯುವಕರು ಹಿಡಕೋರಿ ಹೋರಿ ಹಿಡಕೋರಿ ಎಂದು ಪ್ರಾಣದ ಹಂಗುದೊರೆದು ಮುಗಿ ಬೀಳುತ್ತಿದ್ದ ದೃಶ್ಯಗಳು ರೋಚಕವಾಗಿದ್ದವು.
ಕೆಲವೊಮ್ಮೆ ಜಾರಿ ಬೀಳುತ್ತಿದ್ದ ಯುವಕರಿಗೆ ಸಣ್ಣಪುಟ್ಟ ಗಾಯಗಳು ಸಾಮಾನ್ಯವಾಗಿದ್ದವು. ಅವುಗಳನ್ನು ಲೆಕ್ಕಿಸದೇ ಹೋರಿ ಹಿಡಿಯಲು ಮತ್ತೆ ಸಜ್ಜಾಗುತ್ತಿದ್ದರು. ಹೋರಿ ಓಡಿಸುವಾಗ ಕಾಲು ಜಾರದಿರಲಿ ಎಂದು ಡಾಂಬರ್ ರಸ್ತೆ ಮೇಲೆ ಮಣ್ಣು ಹಾಕಿ ಅಖಾಡ ಸಿದ್ಧಗೊಳಿಸಲಾಗಿತ್ತು. ಸ್ಪರ್ಧೆ ನಡೆಯುವ ರಸ್ತೆ ಇಕ್ಕೆಲಗಳಲ್ಲಿ ಓಡುವ ಹೋರಿಗಳಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಹಾಗೂ ಜನರಿಗೆ ವೀಕ್ಷಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಟ್ಟಿಗೆ ತಡೆಗೋಡೆ ನಿರ್ಮಿಸಲಾಗಿತ್ತು. ಹೋರಿ ಬೆದರಿಸುವ ಕಾರ್ಯಕ್ರಮ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.
ಹೋರಿಗಳಿಗೆ ವಿಶೇಷ ಅಲಂಕಾರಹೋರಿಗಳಿಗೆ ವಿಶೇಷ ಅಲಂಕಾರ ಮಾಡಿ ಸ್ಪರ್ಧೆಯ ಅಖಾಡದಲ್ಲಿ ಬಿಡಲಾಗುತ್ತದೆ. ಈ ಹೊತ್ತಿನಲ್ಲಿ ಅವುಗಳ ಗತ್ತು ನೋಡುವುದೇ ಎಲ್ಲರಿಗೂ ಎಲ್ಲಿಲ್ಲದ ಸಂತಸ. ಹೋರಿಗಳಿಗೆ ರಂಗು ರಂಗಿನ ಜೂಲಾ ಹಾಕಿ, ಕೊರಳಲ್ಲಿ ಗೆಜ್ಜೆಸರ, ಕೊಂಬುಗಳಿಗೆ ಬಗೆಗೆಯ ಬಲೂನ್ ಹಾಗೂ ರಿಬ್ಬನ್ ಕಟ್ಟಿ ಸಿಂಗರಿಸಿ, ಕೊರಳಿಗೆ ಒಣ ಕೊಬ್ಬರಿ ಹಾರ ಕಟ್ಟಿ ಅಖಾಡದಲ್ಲಿ ಓಡಿಸಲಾಯಿತು. ಇದರಲ್ಲಿಯ ಕೆಲ ಹೋರಿಗಳನ್ನು ಫೈಲ್ವಾನರು ಹಿಡಿದು ಕೊಬ್ಬರಿ ಹರಿದುಕೊಳ್ಳುವ ಮೂಲಕ ತಮ್ಮ ಚಾಕಚಕ್ಯತೆ ಮೆರೆದರು. ನೋಡುಗರಿಗೆ ಉತ್ತಮ ಮನರಂಜನೆ ನೀಡಿತು. ಹೋರಿ ಬೆದರಿಸುವ ಸ್ಪರ್ಧೆ ಆರಂಭ..
ನಗರದಲ್ಲಿ ವೀರಭದ್ರೇಶ್ವರ ದೇಗುಲದ ಎದುರು ಆರಂಭವಾದ ಈ ಹೋರಿ ಬೆದರಿಸುವ ಸ್ಪರ್ಧೆ ಎರಡು ತಿಂಗಳು ಕಾಲ ಜಿಲ್ಲೆಯಾದ್ಯಂತ ಈ ಜಾನಪದ ಕ್ರೀಡೆಯಾಗಿ ನಿರಂತರವಾಗಿ ನಡೆಯುತ್ತದೆ. ಬಲಿಪಾಡ್ಯದ ದಿನ ಆರಂಭವಾದ ಸ್ಪರ್ಧೆ ಜಿಲ್ಲೆಯ ವಿವಿಧ ಭಾಗದಲ್ಲಿ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಗಳು ಕೆಲ ಗ್ರಾಮಗಳಲ್ಲಿ ಆಯೋಜಿಸಲಾಗುತ್ತದೆ. ಬಂಗಾರ, ಬೆಳ್ಳಿ, ಬೈಕ್ ಸೇರಿದಂತೆ ನಾನಾ ಬಹುಮಾನಗಳನ್ನು ಸ್ಪರ್ಧೆಯಲ್ಲಿ ವಿಜೇತರಿಗೆ ನೀಡಲಾಗುತ್ತದೆ.