Advertisement
ವಿಧಾನಸೌಧದಲ್ಲಿ ಶುಕ್ರ ವಾರ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಕಮಲಾ ಹಂಪನಾ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಓಬಳಪ್ಪ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಜಿ.ರಂಗಯ್ಯ ಅವರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
Related Articles
ಡಾ.ಕಮಲಾ ಹಂಪನಾ: ಹಿರಿಯ ಮಹಿಳಾ ಸಾಹಿತಿ ಯಾಗಿದ್ದು, ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
Advertisement
ಓಬಳಪ್ಪ: ನಿವೃತ್ತ ಕೃಷಿ ಅಧಿಕಾರಿಯಾಗಿದ್ದು, ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿ ಕಾರಿಯಾಗಿ ಹಾಗೂ ಹರಿಹರದ ವಾಲ್ಮೀಕಿ ಹಾಸ್ಟಲ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಾಲ್ಮೀಕಿ ಸಮಾಜದ ಮಕ್ಕಳಿಗೆ ಶಿಕ್ಷಣದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉಚಿತ ಶಿಕ್ಷಣ ದೊರಕಿಸಿಕೊಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಪರಿಶಿಷ್ಟ ವರ್ಗಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ.
ಡಾ.ಜಿ.ರಂಗಯ್ಯ: ನರರೋಗ ತಜ್ಞರಾಗಿದ್ದಾರೆ. ನ್ಯೂಯಾರ್ಕ್ ಸಿಟಿ ಮೆಡಿಕಲ್ ಸೊಸೈಟಿ ಅಧ್ಯಕ್ಷರಾಗಿ, ಅಮೆರಿಕದ ಇಂಡಿಯನ್ ನ್ಯೂರಾಲಜಿಸ್ಟ್ ಸಂಸ್ಥೆಯ ಕಾರ್ಯದರ್ಶಿಯಾಗಿ, ಇಂಡಿ ಯನ್ ನ್ಯೂರಾಲಜಿಸ್ಟ್ ನ್ಯಾಷನಲ್ ಅಸೋಸಿಯೇಷನ್ ಅಧ್ಯಕ್ಷರಾಗಿ, ನ್ಯೂಯಾರ್ಕ್‌ನ ಪ್ರತಿಷ್ಠಿತ ಸ್ಥಳಗಳಲ್ಲಿ ಸ್ಥಾಪಿಸಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸ್ಥಾಪಕ ಸಮಿತಿ ಸದಸ್ಯರಾಗಿದ್ದಾರೆ. ರಾಷ್ಟದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ.