Advertisement
ಟಿಕೆಟ್ ಹಂಚಿಕೆ ವೇಳೆ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟವರು ತಮ್ಮದೇ ಆದ ಬೆಂಬಲಿಗರ ಪಡೆ ಕಟ್ಟಿಕೊಳ್ಳಲು ಪ್ರಭಾವ ಬೀರಬಾರದು ಎಂಬ ದೃಷ್ಟಿಯಿಂದ ಪ್ರತ್ಯೇಕ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ನಾಯಕತ್ವದ ಗುಂಪುಗಾರಿಕೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ.
ಖರ್ಗೆ ಇದಕ್ಕೆ ಸಮ್ಮತಿಸಿದ್ದು, ಸದ್ಯದಲ್ಲೇ ಟಿಕೆಟ್ ಹಂಚಿಕೆ ಬಗ್ಗೆ ನಿರ್ಧಾರ ಮಾಡುವ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಡಿಸೆಂಬರ್ ಅಂತ್ಯಕ್ಕೆ ಸಮಿತಿಯ ಮೊದಲ ಸಭೆ ದಿಲ್ಲಿಯಲ್ಲಿ ನಡೆಯಲಿದೆ. ಈಗಾಗಲೇ ಎರಡು ಬಾರಿ ಪಕ್ಷದ ವತಿಯಿಂದ ಮಾಡಿಸಲಾಗಿರುವ ಸಮೀಕ್ಷೆ ಮಾಹಿತಿಯನ್ನೂ ಆ ಸಮಿತಿಯ ಮುಂದಿಡಲಾಗುತ್ತದೆ ಎನ್ನಲಾಗಿದೆ.
ಎಐಸಿಸಿ ಅಧ್ಯಕ್ಷರು, ಉಭಯ ಸದನಗಳ ವಿಪಕ್ಷ ನಾಯಕರು, ರಾಜ್ಯ ಉಸ್ತುವಾರಿ, ಕೆಪಿಸಿಸಿ ಅಧ್ಯಕ್ಷರು, ಪ್ರಚಾರ ಸಮಿತಿ ಅಧ್ಯಕ್ಷರೂ ಸೇರಿ ಪ್ರಮುಖರು ಆ ಸಮಿತಿಯಲ್ಲಿ ಇರಲಿದ್ದಾರೆ ಎಂದು ಹೇಳಲಾಗಿದೆ. ಜನವರಿಯಲ್ಲಿ ಮೊದಲ ಪಟ್ಟಿ?
ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಒತ್ತಾಯ ಇರು ವ ಹಿನ್ನೆಲೆಯಲ್ಲಿ ಜನವರಿಯಲ್ಲಿ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
Related Articles
ಸಮ್ಮಿಶ್ರ ಸರಕಾರದ ಸಂದರ್ಭದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದ ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ್, ಚಿಕ್ಕಬಳ್ಳಾಪುರ ಮತ್ತು ಮಹಾಲಕ್ಷ್ಮೀ ಲೇಔಟ್, ಬೊಮ್ಮನಹಳ್ಳಿ, ಮಲ್ಲೇಶ್ವರ, ಬಸವನಗುಡಿ ಸೇರಿ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳು ಸಿಗದಿರುವುದು ಕಾಂಗ್ರೆಸ್‌ಗೆ ತಲೆನೋವಾಗಿದ್ದು, ಅಲ್ಲಿ ಬಿಜೆಪಿ ಆಕಾಂಕ್ಷಿಗಳನ್ನು ಸೆಳೆಯಲು ಪ್ರಯತ್ನಿಸಲು ಸೂಚನೆ ನೀಡಲಾಗಿದೆ. ಕೆಲವರು ಈಗಾಗಲೇ ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
Advertisement
-ಎಸ್. ಲಕ್ಷ್ಮೀನಾರಾಯಣ