Advertisement

Road mishap: ಸರಣಿ ಅಪಘಾತ; 7 ಕಾರು ಪರಸ್ಪರ ಒಂದಕ್ಕೊಂದು ಡಿಕ್ಕಿ

11:02 AM Apr 13, 2024 | Team Udayavani |

ಬೆಂಗಳೂರು: ಜಯನಗರದಲ್ಲಿ ಶುಕ್ರವಾರ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Advertisement

ಜಯನಗರದ ಬಳಿ ಮುಂದೆ ಹೋಗುತ್ತಿದ್ದ ಮಹೇಂದ್ರ ಎಕ್ಸ್‌ ಯುವಿ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ.

ಪರಿಣಾಮ ಅದೇ ರಸ್ತೆಯಲ್ಲಿ ಬರುತ್ತಿದ್ದ 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ ಎಂದು ತಿಳಿದು ಬಂದಿವೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ವಿಫ್ಟ್ ಕಾರಿನಲ್ಲಿದ್ದ ಏರ್‌ ಬ್ಯಾಗ್‌ ತೆರೆದಿದ್ದು, ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾನೆ.ಒಂದು ವೇಳೆ ಏರ್‌ ಬ್ಯಾಗ್‌ ಇಲ್ಲದಿದ್ದರೆ ಚಾಲಕ ಗಂಭೀರ ಗಾಯಕ್ಕೆ ತುತ್ತಾಗುವ ಸಾಧ್ಯತೆಗಳಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಜಯನಗರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಸರಣಿ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 2 ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿವೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next