Advertisement
ಕೆಪಿಎಂಇ ಕಾಯ್ದೆ ತಿದ್ದುಪಡಿ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ಪ್ರತಿನಿಧಿಗಳು ಬುಧವಾರವೂ ಪ್ರತಿಭಟನೆ ನಡೆಸಿದರು. ಇದೇ ವೇಳೆ, ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಕಾರ್ಯಕರ್ತರು ಮಧ್ಯಾಹ್ನ 1.30 ರ ಸುಮಾರಿಗೆ ಸಾವಿರಾರು ಕುರಿಗಳೊಂದಿಗೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನಾಕಾರರ ಒಂದು ಗುಂಪು ಒಮ್ಮೆಲೇ ಸಾವಿರಕ್ಕೂ ಅಧಿಕ ಕುರಿಗಳನ್ನುಸುವರ್ಣ ವಿಧಾನ ಸೌಧದ ಎದುರಿಗೆ ಬಿಟ್ಟರೆ, ಇನ್ನೊಂದು ಗುಂಪು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲು ಮುಂದಾಯಿತು.
ಪೊಲೀಸರು ಪ್ರತಿಭಟನಾಕಾರರನ್ನು ಚೆದುರಿಸಲು ಬೆತ್ತದ ರುಚಿ ತೋರಿಸಿದರು. ಕೆಲವರನ್ನು ತಮ್ಮ ವಶಕ್ಕೆ ತೆಗೆದು ಕೊಂಡು ನಂತರ ಬಿಡುಗಡೆ ಮಾಡಿದರು. ಈ ಮಧ್ಯೆ, ಕಡುಬಡವರಿಗೆ ಆಶ್ರಯ ಮನೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ
ರಾಜ್ಯ ಬಡವರ ಹಿತರಕಣಾ ವೇದಿಕೆ ಕಾರ್ಯ ಕರ್ತರು ಸುವರ್ಣ ವಿಧಾನಸೌಧ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರ್ಥಿಕವಾಗಿ ಹಿಂದುಳಿದವರು ಮನೆ ಇಲ್ಲದೇ ಬದುಕುತ್ತಿದ್ದಾರೆ. ನಿವೇಶನಗಳನ್ನು ತೆಗೆದುಕೊಳ್ಳುವಷ್ಟು ಹಣ ಇಲ್ಲ. ಆದ್ದರಿಂದ ಈಗಾ ಗಲೇ ಗ್ರೂಪ್ ಹೌಸಿಂಗ್ (ಅಪಾರ್ಟ್ ಮೆಂಟ್) ಸೌಕರ್ಯವನ್ನು ಬೆಂಗಳೂರು ನಗರದಲ್ಲಿ ಆರಂಭಿ
ಸಲಾಗಿದ್ದು ಧಾರವಾಡ ಜಿಲ್ಲೆಯಲ್ಲೂ ಈ ಸೌಕರ್ಯ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಬಳಿಕ, ರೈತರಿಗೆ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಪ್ರದೇಶ ರೈತ ಹಾಗೂ ರೈತ ಕಾರ್ಮಿಕ ಸಂಘದ ಸದಸ್ಯರು ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಮುಂದಾದರು. ಪೊಲೀಸರು ಅವರನ್ನು ವಶಕ್ಕೆ ತೆಗದುಕೊಂಡು ನಂತರ ಬಿಡುಗಡೆ ಮಾಡಿದರು. ಇದೇ ವೇಳೆ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ
ಒತ್ತಾಯಿಸಿ ಭಾರತೀಯ ಕೃಷಿಕ ಸಮಾಜದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.