Advertisement

ಬಜೆಟ್‌ನಲ್ಲಿ ಇರಲಿದೆ ಮಹತ್ವದ ಘೋಷಣೆ

12:30 AM Jan 19, 2019 | Team Udayavani |

ಹೊಸದಿಲ್ಲಿ: ಫೆ.1ರಂದು ಮಂಡನೆಯಾಗಲಿರುವ ಮಧ್ಯಂತರ ಬಜೆಟ್‌ ಕೇವಲ ಲೇಖಾನುದಾನ ಮಾತ್ರ ಆಗಿರುವುದಿಲ್ಲ. ಅದಕ್ಕಿಂತ ಹೆಚ್ಚಿನದ್ದನ್ನು ನಿರೀಕ್ಷಿಸಬಹುದು ಎಂದು ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಸುಳಿವು ನೀಡಿದ್ದಾರೆ. ನ್ಯೂಯಾರ್ಕ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು “ಸಿಎನ್‌ಬಿಸಿ-ಟಿವಿ18′ ಕಾರ್ಯ ಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ್ದಾರೆ.

Advertisement

ಅರ್ಥ ವ್ಯವಸ್ಥೆ ವಿಶೇಷವಾಗಿ ಕೃಷಿ ಕ್ಷೇತ್ರದ ಸಮಸ್ಯೆಗೆ ಪರಿಹಾರ ಸೂಚಿಸುವಂಥ ಹಲವು ಕ್ರಮಗಳನ್ನು ಬಜೆಟ್‌ನಲ್ಲಿ ಘೋಷಿಸಬೇಕಾಗುತ್ತದೆ. ಚುನಾವಣೆ ವೇಳೆ ಮಧ್ಯಂತರ ಬಜೆಟ್‌ ಮಂಡಿಸಬೇಕು ಎಂಬ ಸಾಮಾನ್ಯ ನಂಬಿಕೆ ಇದೆ. ಆದರೆ ನಾವು ಆ ನಂಬಿಕೆಯಿಂದ ದೂರ ಹೋಗಲು ಪ್ರಯತ್ನಿಸುತ್ತಿದ್ದೇವೆ. ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಅಥವಾ ಹಲವು ಯೋಜನೆಗಳನ್ನು ಘೋಷಿಸಬೇಕು ಎಂಬ ಒತ್ತಡದಲ್ಲಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಜೇಟ್ಲಿ.

Advertisement

Udayavani is now on Telegram. Click here to join our channel and stay updated with the latest news.

Next