Advertisement
ರಾಜಧಾನಿ ಬೆಂಗಳೂರಿನ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 11 ಕ್ಷೇತ್ರಗಳಲ್ಲಿ ಮತದಾನ ಪ್ರಮಾಣದಲ್ಲಿ ಅಲ್ಪ ಮಟ್ಟಿನ ಏರಿಕೆ ಕಂಡಿದೆ. ಮತದಾನ ನಡೆದ 14 ಕ್ಷೇತ್ರಗಳಲ್ಲಿ 2.67 ಕೋಟಿ ಮತದಾರರಿದ್ದು, ಆ ಪೈಕಿ ಅಂದಾಜು 1.80 ಕೋಟಿ ಮತದಾರರು ಮಾತ್ರ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ 11 ಕ್ಷೇತ್ರಗಳಲ್ಲಿ ಕಳೆದ ಬಾರಿಗಿಂತ ಮತದಾನ ಪ್ರಮಾಣ ಅಲ್ಪ ಮಟ್ಟದಲ್ಲಿ ಹೆಚ್ಚಾಗಿದ್ದರೆ, ಎಂದಿನಂತೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳು ಮತದಾನ ಪ್ರಮಾಣದಲ್ಲಿ ಹಿಂದೆ ಬಿದ್ದಿದ್ದು, ಕಳೆದ ಬಾರಿಗಿಂತ ಕಡಿಮೆ ಮತದಾನ ಆಗಿದೆ.
ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.67.20ರಷ್ಟು ಮತದಾನ ಆಗಿತ್ತು. ಇಡೀ ದೇಶದ ಗಮನ ಸೆಳೆದು ತೀವ್ರ ಹಣಾಹಣಿಯಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.79.98ರಷ್ಟು ಮತದಾನ ಆಗಿದೆ. ಅತಿ ಕಡಿಮೆ ಮತದಾನ ಶೇ.49.76 ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ದಾಖಲಾಗಿದ್ದು, 2014 ಲೋಕಸಭಾ ಚುನಾವಣೆಯಲ್ಲೂ ಇದೇ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 55.64 ಮತದಾನ ಆಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.77.15ರಷ್ಟು ಮತದಾನ ಆಗಿತ್ತು.
Related Articles
Advertisement