Advertisement

ಪೋಟ್ಯಾಷ್ ರಸಗೊಬ್ಬರದ ದರದಲ್ಲಿ ಕೊಂಚ ಏರಿಕೆ : ಕೃಷಿ ಇಲಾಖೆ

06:53 PM Jan 10, 2022 | Team Udayavani |

 

Advertisement

ಬೆಂಗಳೂರು:ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾವಸ್ತುಗಳ‌‌ ಬೆಲೆ ಏರಿಕೆಯಿಂದಾಗಿ ಬಂದರಿನಲ್ಲಿ ರಸಗೊಬ್ಬರ ನಿರ್ವಹಣಾ ವೆಚ್ಚ ಹೆಚ್ಚಾದ ಕಾರಣ ಪೋಟ್ಯಾಷ್ ರಸಗೊಬ್ಬರದ ಬೆಲೆ ಕೊಂಚ ಏರಿಕೆಯಾಗಿದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಎಮ್.ಒ.ಪಿ ರಸಗೊಬ್ಬರದ ಪರಿಷ್ಕೃತ ಗರಿಷ್ಕೃ ಮಾರಾಟ ಬೆಲೆ ಪ್ರತಿ ಚೀಲಕ್ಕೆ ರೂ .1700.  ದೇಶದಲ್ಲಿ ಶೇಕಡ 100 ರಷ್ಟು ಎಮ್.ಒ.ಪಿ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದ್ದು ರಸಗೊಬ್ಬರದ ಗರಿಷ್ಠ ಮಾರಾಟ ದರವನ್ನು ಸರಬರಾಜು ಸಂಸ್ಥೆಗಳಿಂದಲೇ ನಿಗಧಿ ಪಡಿಸಲಾಗುತ್ತದೆ . ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದಂತೆ ಎಮ್.ಒ.ಪಿ ರಸಗೊಬ್ಬರದ ಬೆಲೆಯು ಸಹ ಏರಿಕೆಯಾಗಿರುತ್ತದೆ.ಇದರಿಂದ ಎಮ್.ಒ.ಪಿ ರಸಗೊಬ್ಬರದ ಸರಬರಾಜಿನಲ್ಲಿ ವ್ಯತ್ಯಯವಾಗಿರುತ್ತದೆ . ಆದಾಗ್ಯೂ ಇಂಡಿಯನ್ ಪೊಟ್ಯಾಷ್ ಲಿಮಿಟೆಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸರಬರಾಜುದಾರರೊಂದಿಗೆ ಎಮ್.ಒ.ಪಿ ರಸಗೊಬ್ಬರ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ . ಪ್ರಸ್ತುತವಿರುವ ರಸಗೊಬ್ಬರದ ವಿನಿಮಯ ದರ , ಹೊಸ ಆಮದು ಬೆಲೆ , ಕಸ್ಟಮ್ಸ್ ಸುಂಕ ಹಾಗೂ ಜಿ.ಎಸ್.ಟಿ , ಬಂದರಿನಲ್ಲಿ ರಸಗೊಬ್ಬರದ ನಿರ್ವಹಣೆಯ ಇತರ ವೆಚ್ಚಗಳು ಸೇರಿ ಒಟ್ಟು ದರವು ಪ್ರತಿ ಟನ್ ಗೆ ರೂ . 40,147 ಎಂದು ನಿಗದಿಪಡಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಕೇಂದ್ರ ಸರ್ಕಾರವು ಪುತಿ ಟನ್ ಎಂ.ಒ.ಪಿ ಗೆ ನೀಡುವ ರಿಯಾಯಿತಿ ದರ ರೂ . 6,070 ಹೊರತು ಪಡಿಸಿದಲ್ಲಿ ಪ್ರತಿ ಟನ್ನಿನ ಮಾರಾಟ ದರವು ರೂ . 34,000 ಆಗುತ್ತದೆ ಹಾಗಾಗಿ ಪ್ರತಿ ಚೀಲದ ದರವು ರೂ . 1700 ಆಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next