Advertisement

ಕಲಬುರಗಿ ಕಲಾವಿದೆಯಿಂದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

11:32 AM Nov 18, 2021 | Team Udayavani |

ದಾವಣಗೆರೆ: ಕಲಬುರುಗಿ ಚಿತ್ರ ಕಲಾವಿದೆ ಜಲಜಾಕ್ಷಿ ಪಿ. ಕುಲಕರ್ಣಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ನ.18ರಿಂದ 20ರ ವರೆಗೆ ದಾವಣಗೆರೆಯ ದೃಶ್ಯಕಲಾ ವಿದ್ಯಾಲಯ ಆವರಣದಲ್ಲಿರುವ ದೃಶ್ಯ ವಿಶ್ವ ಆರ್ಟ್‌ ಗ್ಯಾಲರಿಯಲ್ಲಿ ನಡೆಯಲಿದೆ ಎಂದು ದೃಶ್ಯಕಲಾ ಮಹಾವಿದ್ಯಾಲಯ ಬೋಧಕ ದತ್ತಾತ್ರೇಯ ಭಟ್‌ ತಿಳಿಸಿದರು.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರುಗಿಯ ಕಾಲೇಜ್‌ ಆಫ್‌ ವಿಜ್ಯುಯಲ್‌ ಆಟ್ಸ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಜಲಜಾಕ್ಷಿ ಪಿ. ಕುಲಕರ್ಣಿ ರಚಿಸಿರುವ ಪೇಟಿಂಗ್‌ಗೆ ಹಲವಾರು ಪ್ರಶಸ್ತಿಗಳು ಬಂದಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದಾವಣಗೆರೆಯಲ್ಲಿ ಮೊದಲ ಬಾರಿಗೆ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ನೀಡುತ್ತಿದ್ದಾರೆ ಎಂದರು.

ಗುರುವಾರ ಬೆಳಗ್ಗೆ 10:30ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ದೃಶ್ಯಕಲಾ ಮಹಾವಿದ್ಯಾಲಯ ಸಂಯೋಜಕ ಡಾ| ಸತೀಶ್‌ಕುಮಾರ್‌ ಪಿ. ವಲ್ಲೆಪುರೆ ಭಾಗವಹಿಸುವರು. ಮೂರು ದಿನಗಳ ಕಾಲ ಬೆಳಗ್ಗೆ 10:30 ರಿಂದ ಸಂಜೆ 5ರ ವರೆಗೆ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಕಲಾವಿದೆ ಜಲಜಾಕ್ಷಿ ಪಿ. ಕುಲಕರ್ಣಿ ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಏಕವ್ಯಕ್ತಿ ಪ್ರದರ್ಶನದಲ್ಲಿ 25ಕ್ಕೂ ಹೆಚ್ಚು ಸಮಕಾಲೀನ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಸಮಕಾಲೀನ ನವ್ಯಶೈಲಿ, ರೇಖಾ ಚಿತ್ರ, ಮಿಕ್ಸೆಡ್‌ ಮೀಡಿಯಾ, ಪ್ರಕೃತಿಗೆ ಸಂಬಂಧಿಸಿದ ವಿವಿಧ ಕಲಾಕೃತಿಗಳನ್ನು ರಚಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ದಾವಣಗೆರೆಯಲ್ಲಿ ತಮ್ಮ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಕ್ಕೆ ಅವಕಾಶ ನೀಡಿರುವುದಕ್ಕೆ ಸಂತಸವಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next