Advertisement
ದ.ಕ. ಜಿಲ್ಲೆಯ ಚರ್ಚ್‌ಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಚರ್ಚ್ ಆವರಣದಲ್ಲಿ ಮತ್ತು ಕ್ರೈಸ್ತರ ಮನೆ ಆವರಣದಲ್ಲಿ ಆಕರ್ಷಕ ಕ್ರಿಬ್‌ಗಳನ್ನು (ಗೋದಲಿ) ನಿರ್ಮಿಸಲಾಗಿತ್ತು, ನಕ್ಷತ್ರಗಳನ್ನು ಜೋಡಿಸಲಾಗಿತ್ತು.ಚರ್ಚ್‌ಗಳಲ್ಲಿ ರಾತ್ರಿ ವೇಳೆ ಜರಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ರಿಸ್ಮಸ್ ಗೀತೆಗಳನ್ನು (ಕ್ಯಾರಲ್ಸ್) ಹಾಡಿ ಯೇಸು ಕ್ರಿಸ್ತರ ಜನನವನ್ನು ಸ್ಮರಿಸಿ ಯೇಸು ಕಂದನಿಗೆ ನಮಿಸಿದರು.
Related Articles
Advertisement
ಕೊರೊನಾ ರೂಪಾಂತರಿತ ವೈರಸ್ ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲಿಸಿ ಕಾರ್ಯಕ್ರಮಗಳು ನಡೆದವು.
ಶನಿವಾರ ಕ್ರಿಸ್ಮಸ್ ಹಬ್ಬದ ಆಚರಣೆ ನಡೆಯಲಿದೆ. ಚರ್ಚ್‌ಗಳಲ್ಲಿ ಹಬ್ಬದ ಬಲಿ ಪೂಜೆ, ಶುಭಾಶಯಗಳ ವಿನಿಮಯ ನಡೆಯುವುದು. ಮನೆಗಳಲ್ಲಿ ಕ್ರಿಸ್ಮಸ್ ವಿಶೇಷ ತಿಂಡಿ ತಿನಿಸು “ಕುಸ್ವಾರ್’ ವಿನಿಮಯ ಮತ್ತು ಹಬ್ಬದ ಭೋಜನದೊಂದಿಗೆ ಹಬ್ಬದ ಸಂಭ್ರಮ ನೆರವೇರಲಿದೆ.