Advertisement

ಮಕ್ಕಳ ಹಕ್ಕುರಕ್ಷಣೆಗೆ ವಿಶೇಷ ಅಭಿಯಾನ

11:14 PM Nov 05, 2022 | Team Udayavani |

ಬೆಂಗಳೂರು: ಗ್ರಾಮೀಣ ಭಾಗ ದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಮಕ್ಕಳ ದಿನಾಚರಣೆ ದಿನವಾದ ನ. 14ರಿಂದ 10 ವಾರಗಳ “ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್‌ ಅಭಿಯಾನ’ ಹಮ್ಮಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ಧರಿಸಿದೆ.

Advertisement

ಎಲ್ಲ ಗ್ರಾ.ಪಂ.ಗಳಲ್ಲಿ ಈ ಅಭಿಯಾನ ನಡೆಯಲಿದ್ದು, ಇದೇ ಅವಧಿಯಲ್ಲಿ ಒಂದು ಮಕ್ಕಳ ವಿಶೇಷ ಗ್ರಾಮ ಸಭೆಯೂ ನಡೆಯಲಿದೆ.

ಕಳೆದ ವರ್ಷ ನ.14ರಿಂದ 30ರ ವರೆಗೆ ಈ ಅಭಿಯಾನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಪಂಚಾಯತ್‌ಗಳಲ್ಲಿ ಕೋವಿಡ್‌-19ಗೆ ಸಂಬಂಧಿಸಿದ ಅನೇಕ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದರಿಂದ ಮತ್ತು ಚುನಾವಣ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

ಅಭಿಯಾನ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ ಆಯೋಜಿಸುವ ಸಂಬಂಧ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂ. ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಪೂರ್ವಸಿದ್ಧತೆಗಳನ್ನು ನಡೆಸಲು ಮತ್ತು ಅಭಿಯಾನದ ಉದ್ದೇಶಗಳನ್ನು ಮನದಟ್ಟು ಮಾಡಿ ಗ್ರಾಮೀಣಾಭಿವೃದ್ಧಿ ಇಲಾಖೆ ವಿವರವಾದ ಮಾರ್ಗದರ್ಶನ ಮಾಡಿ, ಪಂಚಾಯ
ತ್‌ಗಳ ಜವಾಬ್ದಾರಿಯನ್ನು ನಿಗದಿಪಡಿಸಿದೆ.

ಅಭಿಯಾನದ ಕಾರ್ಯಕ್ರಮಗಳು
– ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ “ಕನ್ಯಾ ಶಿಕ್ಷಾ ಪ್ರವೇಶ್‌ ಉತ್ಸವ್‌’ ಅಂಗವಾಗಿ ಶಾಲೆಯಿಂದ ಹೊರಗುಳಿದ 11-14 ವರ್ಷದ ಹೆಣ್ಣು ಮಕ್ಕಳನ್ನು ಶಾಲೆಗೆ ದಾಖಲಿಸಬೇಕು.
– ಮಕ್ಕಳ ಜನನ ನೋಂದಣಿ, ಜನನ ಪ್ರಮಾಣಪತ್ರಗಳನ್ನು ವಿತರಿಸುವುದು.
– ಪೌಷ್ಟಿಕ ಆಹಾರ ಕುರಿತು ಮಾರ್ಗದರ್ಶನ, ಜಾಗೃತಿ ಮೂಡಿಸುವುದು.
– ಮಕ್ಕಳಿಗೆ ಚುಚ್ಚುಮದ್ದು ಪ್ರಾಮುಖ್ಯವನ್ನು ವಿವರಿಸುವುದು.
– ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಳ್ಳುವುದು.

Advertisement

ಮಕ್ಕಳ ವಿಶೇಷ ಗ್ರಾಮ ಸಭೆ
ಹತ್ತು ವಾರಗಳ ಅಭಿಯಾನದ ಸಂದರ್ಭದಲ್ಲಿ ಪ್ರತಿವಾರ ಚಟು ವಟಿಕೆಗಳನ್ನು ಕೈಗೊಳ್ಳಬೇಕು. ಈ ಅಭಿಯಾನದ ಅವಧಿಯಲ್ಲಿ ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಬೇಕು. ಈ ಸಭೆಯಲ್ಲಿ ಮಕ್ಕಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಬೇಕು. ಇದರಲ್ಲಿ ಮಕ್ಕಳು ಅವರ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿ ಸಲು ಹೆಚ್ಚಿನ ಅವಕಾಶ ಕೊಡಬೇಕು. ಸಭೆಯಲ್ಲಿ ಕೇಳಿ ಬರುವ ಸಲಹೆ, ಅಭಿಪ್ರಾಯಗಳು ಮತ್ತು ಕೈಗೊಳ್ಳಲಾದ ನಿರ್ಣಯಗಳ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಜರಗಿಸಬೇಕು ಎಂದು ಇಲಾಖೆ ಸೂಚಿಸಿದೆ.

ರಾಜ್ಯದಲ್ಲಿ 15 ವರ್ಷಗಳಿಂದ ಮಕ್ಕಳ ಗ್ರಾಮ ಸಭೆಗಳನ್ನು ನಡೆಸಲಾಗುತ್ತಿದೆ. ಹಳ್ಳಿಗಳಲ್ಲಿ ಮಕ್ಕಳ ಸಮಸ್ಯೆ, ಬೇಡಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಮಂಡಿಸಿ ಅಗತ್ಯ ಪರಿಹಾರ ಕಂಡುಕೊಳ್ಳುವುದಕ್ಕೆ ಮಕ್ಕಳ ಗ್ರಾಮ ಸಭೆ ಪ್ರಮುಖ ವೇದಿಕೆಯಾಗಿದೆ. ಮಕ್ಕಳ ಗ್ರಾಮ ಸಭೆಯನ್ನು ಒಂದು ದಿನಕ್ಕೆ ಸೀಮಿತಗೊಳಿಸಿದೆ ಅದಕ್ಕೆ ಅಭಿಯಾನದ ರೂಪ ನೀಡಲಾಗುತ್ತಿದೆ.
– ಉಮಾ ಮಹದೇವನ್‌,
ಅಪರ ಮುಖ್ಯ ಕಾರ್ಯದರ್ಶಿ, ಆರ್‌ಡಿಪಿಆರ್‌ ಇಲಾಖೆ

-ರಫೀಕ್‌ ಅಹ್ಮದ್‌

Advertisement

Udayavani is now on Telegram. Click here to join our channel and stay updated with the latest news.

Next