Advertisement

ಪ್ರತಿಪಕ್ಷಗಳ ಒಕ್ಕೂಟದಲ್ಲಿ ಕಾಂಗ್ರೆಸ್‌ಗೆ ವಿಶೇಷ ಸ್ಥಾನ- ಪಿ.ಚಿದಂಬರಂ ಪ್ರತಿಪಾದನೆ

09:27 PM Jul 16, 2023 | Team Udayavani |

ನವದೆಹಲಿ: ಎಲ್ಲಾ ಪ್ರತಿಪಕ್ಷಗಳೂ ಒಗ್ಗಟ್ಟಾಗುವ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಎದುರಿಸಲು ಸಾಧ್ಯವಿದೆ. ಪ್ರತಿಪಕ್ಷಗಳ ಒಕ್ಕೂಟದಲ್ಲಿ ಕಾಂಗ್ರೆಸ್‌ಗೆ ವಿಶೇಷ ಸ್ಥಾನವಿದೆ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪ್ರತಿಪಾದಿಸಿದ್ದಾರೆ. ಅದರ ಬಗ್ಗೆ ಸದ್ಯ ಹೆಚ್ಚು ಮಾತನಾಡುವ ಅಗತ್ಯವಿಲ್ಲ ಎಂದೂ ಹೇಳಿದ್ದಾರೆ.

Advertisement

ಸೋಮವಾರದಿಂದ 2 ದಿನ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಪೂರಕವಾಗಿ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದ ನಾಯಕರನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದಿದ್ದಾರೆ.

ಪ್ರತಿಪಕ್ಷಗಳು ಸಮಾನ ದೃಷ್ಟಿಕೋನವನ್ನು ಹೊಂದಿವೆ ಎಂದು ಅಭಿಪ್ರಾಯಪಟ್ಟ ಚಿದಂಬರಂ, ಬಿಜೆಪಿ ನೇತೃತ್ವದ ಸರ್ಕಾರ ಹೊಂದಿರುವ ಆರ್ಥಿಕ ಮತ್ತು ಸಾಮಾಜಿಕ ನೀತಿಗಳನ್ನು ವಿರೋಧಿಸುತ್ತಾ ಬಂದಿವೆ ಎಂದರು. ನಿಧಾನಗತಿಯ ಅರ್ಥ ವ್ಯವಸ್ಥೆಯ ಬೆಳವಣಿಗೆ, ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ ಪ್ರಮಾಣ, ನಾಗರಿಕರ ಹಕ್ಕುಗಳ ದಮನ, ಮಾಧ್ಯಮಗಳ ಮೇಲೆ ನಿಯಂತ್ರಣ, ತನಿಖಾ ಸಂಸ್ಥೆಗಳ ದುರುಪಯೋಗ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಏಕಾಭಿಪ್ರಾಯ ಹೊಂದಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next