Advertisement
ಪ್ರಧಾನಿ ಮೋದಿ ನೀಲಕಂಠ: ಸಿಎಂಕಲಬುರಗಿ: ಪ್ರಧಾನಿ ಮೋದಿ ಅವರನ್ನು ವಿಷ ಸರ್ಪ ಅಂತ ಕಲ್ಯಾಣ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಸರ್ಪ ನೀಲಕಂಠನ ಸಂಕೇತ. ಮೋದಿ ದೇಶದ ಭಯೋತ್ಪಾದನೆ, ಭ್ರಷ್ಟಾಚಾರ, ಬಡತನವನ್ನು ಒಧ್ದೋಡಿಸಿ ಸಶಕ್ತ ಭಾರತ ಕಟ್ಟಲು ಹಲವಾರು ರೀತಿಯ ವಿಷವನ್ನು ನುಂಗಿ ನೀಲಕಂಠ ಆಗಿದ್ದಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸೇಡಂನಲ್ಲಿ ರೋಡ್ ಶೋ ವೇಳೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಗೆ ದಿನಕ್ಕೊಂದು ಬಾರಿ ಮೋದಿ ಹೆಸರು ಹೇಳದಿದ್ದರೆ ನಿದ್ರೆ ಬರದು. ಇದು ಮೋದಿ ಬಗ್ಗೆ ಅವರಿಗಿರುವ ಭೀತಿಗೆ ಸಾಕ್ಷಿಯಾಗಿದೆ. ಮೋದಿ ನೇತೃತ್ವದಲ್ಲಿ ಎಲ್ಲೆಲ್ಲಿ ಚುನಾವಣೆ ಆಗಿದೆಯೋ ಅಲ್ಲೆಲ್ಲ ಕಾಂಗ್ರೆಸ್ ನಿರ್ಮೂಲವಾಗಿದೆ. ಈಗ ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಸೋಲುವ ಸ್ಥಿತಿ ಬಂದಿದ್ದು, ರಾಜ್ಯದಲ್ಲಿ ಬಿಜೆಪಿಯ ಸುನಾಮಿ ಎದ್ದಿದೆ ಎಂದರು.
– ವಿ. ಸುನಿಲ್‌ಕುಮಾರ್, ಸಚಿವ ಮೋದಿ ಟೀಕಿಸಿದ ಖರ್ಗೆ ಗೌರವ ಮಣ್ಣುಪಾಲು
ಶಿವಮೊಗ್ಗ: ಖರ್ಗೆಗೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಒಂದು ತೂಕವಿತ್ತು. ಆದರೆ ಇಡೀ ವಿಶ್ವವೇ ಮೆಚ್ಚಿರುವ ಪ್ರಧಾನಿ ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಅವರೇ ತಮ್ಮ ಗೌರವವನ್ನು ಮಣ್ಣುಪಾಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರಾಗಿರುವ ಖರ್ಗೆ ಇಂತಹ ಹೇಳಿಕೆ ನೀಡಿರುವುದು ದುರಂತ. ಖರ್ಗೆ ಅವರು ಪ್ರಧಾನಿ ಮೋದಿ ಬಗ್ಗೆ ಆ ರೀತಿ ಹೇಳಿಕೆ ನೀಡಿದ್ದಾರಾ ಎಂಬ ಅನುಮಾನ ಇನ್ನೂ ಕಾಡುತ್ತಿದೆ. ಇದುವರೆಗೆ ಖರ್ಗೆಯವರನ್ನು ನಾವು ಕೂಡ ತಂದೆ ಸ್ವರೂಪದಲ್ಲಿ ಗೌರವಿಸುತ್ತಿದ್ದೆವು. ಆದರೆ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆಂದು ಭಾವಿಸಿರಲಿಲ್ಲ. ಅವರಿಗೆ ಈ ದುಃಸ್ಥಿತಿ ಯಾಕೆ ಬಂತೆಂಬುದು ನನಗೂ ಅರ್ಥವಾಗುತ್ತಿಲ್ಲ ಎಂದರು.
Related Articles
Advertisement
ಬಿಜೆಪಿ ದೇಶದಲ್ಲಿ ಬರೀ ಬೆಂಕಿ ಹಚ್ಚುವ, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್ ಅಂಥವರನ್ನು ಟಾರ್ಗೆಟ್ ಮಾಡಿ ದ್ವೇಷ ಸಾ ಧಿಸುತ್ತಿದ್ದಾರೆ. ಸಮಾಜದ ನೆಮ್ಮದಿ ಹಾಳು ಮಾಡುವ ಬಿಜೆಪಿಯ ಎಲ್ಲ ವಿಷ ಜಂತುಗಳಿಗೆ ಪಾಠ ಕಲಿಸಬೇಕಾಗಿದೆ.-ಉಮಾಶ್ರೀ, ಮಾಜಿ ಸಚಿವೆ ಮೋದಿ ಅವರ ಬಗ್ಗೆ ಖರ್ಗೆ ಹೇಳಿಕೆ ಅವರ ಕೀಳು ಮಟ್ಟದ ಅಭಿರುಚಿ ತೋರಿಸುತ್ತದೆ. ಕಾಂಗ್ರೆಸ್ ದೇಶದ ಎಲ್ಲೆಡೆ ಅಸ್ತಿತ್ವ ಕಳೆದುಕೊಂಡಿದ್ದು, ಕರ್ನಾಟಕದಲ್ಲೂ ಕೊನೆಯುಸಿರು ಎಳೆಯುತ್ತಿದೆ. ಇಂತಹ ಪಕ್ಷದಲ್ಲಿ ಇದುವರೆಗೂ ಸಜ್ಜನ ಎಂದೇ ಹೆಸರಾಗಿದ್ದ ಖರ್ಗೆಯವರೂ ಸೋನಿಯಾ ಗಾಂಧಿ ಕುಟುಂಬವನ್ನು ಓಲೈಸಲು ಈ ರೀತಿಯ ಶಬ್ದಗಳನ್ನು ಪ್ರಯೋಗಿಸಿದ್ದಾರೆ.
– ಕ್ಯಾ| ಗಣೇಶ್ ಕಾರ್ಣಿಕ್, ಬಿಜೆಪಿ ರಾಜ್ಯ ವಕ್ತಾರ ಖರ್ಗೆಯವರು ದೇಶದ ಪ್ರಧಾನಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ, ಅವರು 140 ಕೋಟಿ ಭಾರತೀಯರನ್ನು ಅವಮಾನಿಸಿ¨ªಾರೆ. ವಿಶ್ವ ಮನ್ನಣೆ ಪಡೆದ ಪ್ರಧಾನಿಯನ್ನು ವಿಷ ಸರ್ಪಕ್ಕೆ ಹೋಲಿಸಿರುವುದು ರಾಜಕೀಯ ದಿವಾಳಿತನ ಮತ್ತು ಅವರ ವ್ಯಕ್ತಿತ್ವ ತೋರಿಸುತ್ತದೆ. ಚುನಾವಣೆಯಲ್ಲಿ ವೈಯಕ್ತಿಕ ನಿಂದನೆ ಸರಿಯಲ್ಲ.
-ಡಾ| ಕೆ.ಸುಧಾಕರ್, ಆರೋಗ್ಯ ಸಚಿವ