Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಳೆ ಮಕ್ಕಳ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಘಟನೆ ನಿಜಕ್ಕೂ ನೋವು ತಂದಿದೆ. ಪ್ರಕರಣದ ಸಂಬಂಧ 164 (ಸಿಆರ್‌ಪಿಸಿ) ಕಾಯ್ದೆಯಡಿ ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ಬಹಳ ಮುಖ್ಯವಾಗುತ್ತದೆ. ಸಣ್ಣ ಮಕ್ಕಳಾದ ಕಾರಣ ಹೇಳಿಕೆ ನೀಡಲು ಹಿಂಜರಿಯಬಹುದು. ಹೀಗಾಗಿ ತಾಯಂದಿರ ಸಮ್ಮುಖದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ಅನುಮತಿ ನೀಡುವಂತೆ ಮ್ಯಾಜಿಸ್ಟ್ರೇಟ್ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ.
Related Articles
ಖಾಸಗಿ ಶಾಲೆಯಲ್ಲಿ ಮಕ್ಕಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಬೆಳ್ಳಂದೂರು ಪ್ರಕರಣದ ಶೀಘ್ರ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ. ಪ್ರಕರಣದ ಆರೋಪಿಯನ್ನು ಸುಮ್ಮನೆ ಬಿಡುವುದಿಲ್ಲ. ಶಿಕ್ಷೆ ಕೊಡಿಸಲಾಗುವುದು ಎಂದಿದ್ದಾರೆ.
Advertisement
ಶೂಟೌಟ್ ಪ್ರಕರಣದ ತನಿಖೆ ಶೀಘ್ರ ಪೂರ್ಣ ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ಕೋಗಿಲು ಕ್ರಾಸ್ ಸಿಗ್ನಲ್ ಬಳಿ ನಡೆದಿದ್ದ ಶೂಟೌಟ್ ಪ್ರಕರಣ ತನಿಖಾ ಹಂತದಲ್ಲಿದೆ. ನೂರಕ್ಕೆ ನೂರು ಭಾಗ ತನಿಖೆ ಪೂರ್ಣಗೊಳಿಸಿ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.