Advertisement

ಜೆಡಿಎಸ್‌ ಪುನಃಶ್ಚೇತನಕ್ಕೆ ರಾಜ್ಯಾದ್ಯಂತ ಪ್ರವಾಸ : ಎಚ್‌.ಡಿ. ಕುಮಾರಸ್ವಾಮಿ

03:32 PM Aug 24, 2021 | Team Udayavani |

ಲಕ್ಷ್ಮೇಶ್ವರ: ರೈತರ ಆರ್ಥಿಕ ಸಬಲೀಕರಣ, ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ವಸತಿ ಯೋಜನೆಗಳಿಗೆ ಹೊಸ ರೂಪ ಕೊಡುವ “ಪಂಚರತ್ನ’ ಕಾರ್ಯಕ್ರಮಗಳ ಮೂಲಕ ರಾಜ್ಯದಲ್ಲಿ ಜೆಡಿಎಸ್‌ ಪಕ್ಷದ ಪುನಃಶ್ಚೇತನ ಮತ್ತು ಸ್ವತಂತ್ರ ಸರಕಾರ ರಚನೆಗೆ ರಾಜ್ಯಾದ್ಯಂತ ಪ್ರವಾಸ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Advertisement

ಜೆಡಿಎಸ್‌ಗೆ ವಿವಿಧ ಪಕ್ಷಗಳ ಕಾರ್ಯ ಕರ್ತರ ಸೇರ್ಪಡೆಗೆ ಸಂಬಂಧಿಸಿ ಪಟ್ಟಣಕ್ಕೆ ಆಗಮಿಸಿದ್ದ ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಬಾಳಿಕಾಯಿ ಅವರ ನಿವಾಸ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದರು.

ದೊಡ್ಡಮಟ್ಟದ ನಾಯಕರ ಹೊರತಾಗಿ ಯುವಕರಿಗೆ ಆದ್ಯತೆ ಕೊಡುವ ಮೂಲಕ ಜೆಡಿಎಸ್‌ ಸಂಘಟ ನೆಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾ ಗುತ್ತಿದೆ. ತಮ್ಮ ಆಡಳಿತಾವ ಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಪಕ್ಷಕ್ಕೆ ಶ್ರೀರಕ್ಷೆಯಾಗಿವೆ ಎಂದರು.

ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ಶಿರಹಟ್ಟಿ ಕ್ಷೇತ್ರದ ಸುಗ್ನಳ್ಳಿ ಗ್ರಾಮದಲ್ಲಿ 2007ರಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿತ್ತು. ಆ ವೇಳೆ ಗ್ರಾಮದ ಆಲದಮ್ಮನ ಕೆರೆ ಅಭಿವೃದ್ಧಿ ಸೇರಿ ಒಟ್ಟು 24 ಕೋಟಿ ರೂ. ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು. ಕೆರೆ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಸ್ಥಳೀಯ ಶಾಸಕರು ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ಇಲ್ಲಿಗೆ ಆಗಮಿಸಿದ್ದೆ. ಆದರೆ ಶಾಸಕರು ಯಾರದೋ ಮಾತು ಕೇಳಿ ಕಾಮಗಾರಿ ಕಾರ್ಯಕ್ರಮ ರದ್ದು ಮಾಡಿದ್ದಾರೆ. ಈ ಕುರಿತು ನಮಗೆ ಯಾವುದೇ ಬೇಸರವಿಲ್ಲ ಮತ್ತು ಆರೋಪವನ್ನೂ ಮಾಡಲ್ಲ. ಅವರಿಗೆ ಒಳ್ಳೆಯದಾಗಲಿ. ಪಕ್ಷ ಸಂಘಟನೆ, ಕಾರ್ಯಕರ್ತರ ಭೇಟಿ, ತಾಲೂಕಿನ ಜನರ ಅಹವಾಲು ಸ್ವೀಕಾರ, ಬಾಲೇಹೊಸೂರು ದಿಂಗಾಲೇಶ್ವರ ಶ್ರೀ ಭೇಟಿ ಪ್ರವಾಸದ ಮುಖ್ಯ ಉದ್ದೇಶವಾಗಿದೆ ಎಂದರು.

ಶಿರಹಟ್ಟಿ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿ: ಬರುವ ವಿಧಾನಸಭಾ ಚುನಾವಣೆಯಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಕ್ಷೇತ್ರ ಗೆಲ್ಲುವ ಕಾರ್ಯತಂತ್ರ ರೂಪಿಸಲಾಗುವುದು. ಅದಕ್ಕೆ ಪೂರಕವಾಗಿ ಬರುವ ಜಿಪಂ-ತಾಪಂ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಯುವ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಲಾಗುವುದು ಎಂದರು. ಎನ್‌.ಎಚ್‌.ಕೋನರಡ್ಡಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಅಂದಾನಯ್ಯ ಕುರ್ತಕೋಟಿ ಮಠ, ಪ್ರಧಾನ ಕಾರ್ಯದರ್ಶಿ ಶಂಕರ ಬಾಳಿಕಾಯಿ, ತಾಲೂಕು ಅಧ್ಯಕ್ಷ ಪದ್ಮರಾಜ ಪಾಟೀಲ, ಜಾಕೀರ ಹವಾಲ್ದಾರ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next