‘ಆಮೇಲೆ?’ ಅಂದರು.
“ಜವಾಹರಲಾಲ್ ನೆಹರೂ’ ಅಂದೆ.
ಅವರು ಬೆರಳು ಮಡಚುತ್ತ ಹೋಗುತ್ತಿದ್ದರು.
“ಆಮೇಲೆ…?’ ಎನ್ನುವ ಪ್ರಶ್ನೆ ಮತ್ತೆ ಬರುವ ಮುನ್ನವೇ ನಾನು ಸರ್ದಾರ್ ವಲ್ಲಭಬಾಯಿ ಪಟೇಲರನ್ನೂ ನಡೆಸಿಕೊಂಡು ಬಂದೆ. ರಾಜಗೋಪಾಲ ಆಚಾರಿ ಅವರೂ ಜೊತೆಯಾದರು.
Advertisement
ಲೆಕ್ಕ ಹಾಗೇ ಮುಂದುವರಿಯಿತು. ಎಲ್. ಕೆ. ಅಡ್ವಾಣಿ, ಟಿ. ಎನ್. ಶೇಷನ್, ಓಂ ಪುರಿ, ಶ್ಯಾಮ್ ಬೆನಗಲ್, ರಜನೀಕಾಂತ್, ಅನುಪಮ್ ಖೇರ್, ಕಟ್ಟಪ್ಪ , ವೀರೇಂದ್ರ ಸೆಹ್ವಾಗ್, ಲಾಲ್ ಬಹಾದ್ದೂರ್ ಶಾಸ್ತ್ರೀ, ಕರುಣಾನಿಧಿ…ಎದುರಿಗಿದ್ದವರ ಹತ್ತೂ ಬೆರಳು ಮಡಚಿ ಹೋಗಿ ಆಗಲೇ ಸಾಕಷ್ಟು ಸಮಯವಾಗಿತ್ತು.
“ಒಂದಾನೊಂದು ಕಾಲದಾಗ ಏಸೊಂದ ಮುದ ಇತ್ತಾ…’ ಅನ್ನುವಂತೆ ನಾನು, “ನನಗೆ ಚೆಗೆವಾರನಷ್ಟೇ ದಟ್ಟ ಕೂದಲಿತ್ತು ಗೊತ್ತಾ?’ ಎಂದರೆ ಎದುರಿಗಿದ್ದವರು ಹೊಟ್ಟೆ ಹುಣ್ಣಾಗುವಂತೆ ನಗುತ್ತಾರೆ. ನಾನೋ ಮಂಗಳೂರಿಗಿಷ್ಟು, ಗುಲ್ಬರ್ಗಕ್ಕಿಷ್ಟು, ಹೈದರಾಬಾದ್‌ಗಿಷ್ಟು ಎಂದು ಮೂರು ಮಕ್ಕಳಿಗೆ ಆಸ್ತಿ ಮೂರು ಪಾಲು ಮಾಡಿಕೊಟ್ಟ ಹಿರಿಯನಂತೆ ನನ್ನ ಕೂದಲನ್ನು ಪಾಲು ಮಾಡಿಕೊಟ್ಟುಬಿಟ್ಟಿ¨ªೆ. ಮೂರೂ ಸ್ಥಳದಲ್ಲಿನ ಗಡಸು ನೀರು ನನ್ನ ಸೊಂಪು ಕೂದಲನ್ನು ನನ್ನ ಕಣ್ಣ ಮುಂದೆಯೇ ಬಚ್ಚಲ ಪಾಲಾಗಿಸಿತ್ತು.
Related Articles
Advertisement
ಮಾರ್ಕ್ಸ್ ಗೊತ್ತಲ್ವಾ? ಅದೇ ಕಾರ್ಲ್ಮಾರ್ಕ್ಸ್. ಆತ, “ಜಗತ್ತಿನ ಕಾರ್ಮಿಕರೇ ಒಂದಾಗಿ ನೀವು ಕಳೆದುಕೊಳ್ಳುವುದೇನಿಲ್ಲ, ಸಂಕೋಲೆಗಳನ್ನು ಹೊರತು…’ ಅಂತ ಕರೆ ಕೊಟ್ಟಿದ್ದ. ಅದೇ ರೀತಿ ದೆಹಲಿಯಲ್ಲೂ ಒಂದು ಮಹತ್ವದ, ಸುವರ್ಣಾಕ್ಷರದಲ್ಲಿ ಕೆತ್ತಿ ಇಡಬೇಕಾದ ಘೋಷಣೆಯೊಂದು ಹೊರಹೊಮ್ಮಿತು. “ಜಗತ್ತಿನ ಬಾಲ್ಡಿಗಳೇ ಒಂದಾಗಿ, ನೀವು ಕಳೆದುಕೊಳ್ಳುವುದೇನಿಲ್ಲ, ಕೂದಲೊಂದನ್ನು ಬಿಟ್ಟು’
ಹಾಂ… ಹೀಗೂ ಉಂಟೇ! ಅಂತ ನನ್ನ ಕೇಳಿದರೆ ನಾನು ತಾನೇ ಏನು ಹೇಳಲು ಸಾಧ್ಯ. “ಹೀಗೂ ಉಂಟು…’ ಎಂದು ಸಂಭ್ರಮಪಡುವುದನ್ನು ಬಿಟ್ಟು. ಒಂದು ದಿನ ದೆಹಲಿಯ ವಕೀಲರೊಬ್ಬರು ನೋಡುತ್ತಾರೆ- ತಮ್ಮ ಮನೆಯಲ್ಲಿ ಕುಳಿತಿದ್ದ ಅಷ್ಟೂ ಜನರನ್ನು. ಬೋಧಿವೃಕ್ಷದ ಕೆಳಗೆ ಬುದ್ಧನಿಗೆ ಹೇಗೆ ಜ್ಞಾನೋದಯವಾಗಿ ಹೋಯೊ¤à ಆ ರೀತಿ ಆ ವಕೀಲರಿಗೂ ಆ ಕ್ಷಣದಲ್ಲಿ ಜ್ಞಾನೋದಯವಾಗಿ ಹೋಯ್ತು. ಯಾಕೆಂದರೆ ಅವರ ಮನೆಯಲ್ಲಿ ಆಗ ಕುಳಿತಿದ್ದ 20 ಜನರಲ್ಲಿ 15 ಮಂದಿ ಬಾಲ್ದಿಗಳೇ. ಆಗಲೇ ಅವರಿಗೆ ಅನಿಸಿಹೋಯಿತು- ಬಾಲ್ಡಿಗಳನ್ನು ಕಾಪಾಡಬೇಕು ಎಂದು. “ಕೆಂಡದ ಮೇಲೆ ನಡೆದವರಿಗೆ ಮಾತ್ರ ಕೆಂಡದ ಬಿಸಿ ಅರಿವಾಗುತ್ತದೆ’ ಎನ್ನುವಂತೆ ಬಾಲ್ಡಿªಗಳಿಗಷ್ಟೇ ಬಾಲ್ಡಿªಗಳ ದುಃಖ ಗೊತ್ತಾಗಲು ಸಾಧ್ಯ ಎಂದು ತೀರ್ಮಾನಿಸಿದವರೇ ಸಂಘ ಸ್ಥಾಪಿಸಿಯೇಬಿಟ್ಟರು. ಅದೂ ಅಂತಿಂತ ಸಂಘವಲ್ಲ- ಅದರ ಹೆಸರು, “ಬಾಲ್ಡೀಸ್ ಇಂಟರ್‌ನ್ಯಾಶನಲ್’. ಅದರ ಕಾರ್ಯಾಚರಣೆಯ ಸ್ಥಳವೂ ಅಂತಿಂತಹುದಲ್ಲ , ಫೈವ್ ಸ್ಟಾರ್ ಹೊಟೇಲ್. ಪ್ರತೀ ತಿಂಗಳ ಮೊದಲ ಹಾಗೂ ಕೊನೆಯ ಗುರುವಾರ ಬಾಲ್ಡಿªಗಳ ಸಭೆ. ಕಷ್ಟ-ಸುಖ ಮಾತಾಡಿಕೊಂಡು ಸಿಕ್ಕಿ¨ªೆಲ್ಲವನ್ನು ಹೀರುತ್ತ ತಾವು ಬಾಲ್ಡಿªಗಳಾಗಲು ತಮ್ಮ ಹೆಂಡತಿಯರು ಕಾರಣವೋ, ಹೆಲ್ಮೆಟ್‌ಗಳು ಕಾರಣವೋ, ದೆಹಲಿಯ ಈ ದರಿದ್ರ ಹವಾಮಾನ ಕಾರಣವೋ ಅಥವಾ ಜೀನ್ಸ್‌ಗಳೇ ಈ ನಡುವೆ ಎಕ್ಕುಟ್ಟಿಹೋಗಿದೆಯೋ ಎಂದು ಚರ್ಚಿಸುತ್ತ ಕೂತು ಎದ್ದು ಹೋಗುತ್ತಿದ್ದರು. 19 ಜನ ಬಾಲ್ಡಿಗಳ ಘನ ಸದಸ್ಯತ್ವದಲ್ಲಿ ಸಂಘ ಆರಂಭವಾಗಿ ಹೋಯ್ತು. ಆದರೆ, ಈ ಸಂಘ ಬದುಕುಳಿಯುತ್ತೆ ಎನ್ನುವ ನಂಬಿಕೆ ಆ ಸದಸ್ಯರಿಗೇ ಇರಲಿಲ್ಲ. ತಮ್ಮ ಕಣ್ಣ ಮುಂದೆಯೇ ತಮ್ಮ ಕೂದಲುಗಳು ಉದುರಿಹೋದಂತೆ ಈ ಸಂಘವೂ ಉದುರಿಹೋಗುತ್ತದೆ ಎಂದು ಭಾವಿಸಿದ್ದರು. ಆದರೆ ಆಶ್ಚರ್ಯ, ಪರಮಾಶ್ಚರ್ಯ! ಸಂಘದ ಸದಸ್ಯತ್ವ ನೋಡ ನೋಡುತ್ತಿದ್ದಂತೆ 150ಕ್ಕೇರಿತು. ಸಂಘದ ಸದಸ್ಯರಾಗಲು ಇದ್ದ ಎರಡು ಕಂಡೀಷನ್ ಪೈಕಿ ಒಂದನ್ನು ಹೇಳಲೇಬೇಕಿಲ್ಲ ಅವರು ಬಾಲ್ಡ… ಆಗಿರಬೇಕು ಅಂದ ಮಾತ್ರಕ್ಕೆ ಸಂಘದ ಸದಸ್ಯತ್ವ ಸಿಕ್ಕಿಬಿಡುತ್ತಿರಲಿಲ್ಲ. ತಾವು ಬಾಲ್ಡ… ಎನ್ನುವ ಬಗ್ಗೆ ಹೆಮ್ಮೆ ಇರಬೇಕು, ಅಹಂ ಇರಬೇಕು, ಕೊಬ್ಬಿರಬೇಕು. ಇದು ಎರಡನೆಯ ಕಂಡೀಶನ್. ಕೂದಲಿದ್ದ ತಲೆ ನೋಡಿದರೆ ಸಾಕು ಉಕ್ಕೀ ಉಕ್ಕಿ ನಗು ಬರಬೇಕು. ಈ ಸಂಘ ಘನಂಧಾರಿ ಸಂಘವೇ. ಇದು ಗೌರವ ಸದಸ್ಯತ್ವವನ್ನೂ ಕೊಡುತ್ತಿತ್ತು. ಹಾಗೆ ಒಂದು ಸಲ ಗೌರವ ಸದಸ್ಯತ್ವ ಕೊಟ್ಟಿದ್ದು ಯಾರಿಗೆ ಗೊತ್ತಾ- ಐ. ಕೆ. ಗುಜ್ರಾಲ್‌ಗೆ. ಬಾಲ್ಡಿ ಸಂಘದಲ್ಲಿ ಬರೀ ಆಟ ಕೂಟ ಅಲ್ಲ, ವಿಚಾರ ವಿನಿಮಯವೂ ಆಗುತ್ತಿತ್ತು. ಆದರೆ, ಭಾಷಣಕಾರರಾಗಿ ಬರುವವರು ಸಹಾ… ಗೊತ್ತಾಯ್ತಲ್ವಾ? ಒಂದು ಸಲ ಹೀಗೆ ಎಲ್ಲಾ ಸಭೆ ಸೇರಿದ್ದಾರೆ. ಆಗ ಒಬ್ಬ ಸರ್ದಾರ್ಜಿ ಅಲ್ಲಿಗೆ ಎಂಟ್ರಿ ಕೊಟ್ಟರು. ತಮಗೂ ಸಂಘದ ಸದಸ್ಯತ್ವ ಕೊಡಬೇಕು ಅಂತ. ತಲೆಗೆ ಭಾರೀ ಪಂಜಾಬಿ ಪಗಡಿ. ಇವರು ಸಂಘಕ್ಕೆ ಅರ್ಹರೋ ಇಲ್ಲವೋ ಯಾರಿಗೆ ಗೊತ್ತು. ಪಗಡಿ ಬಿಚ್ಚಿ ಎನ್ನೋಣ ಅಂದರೆ ಆ ದಿನ ಸದಸ್ಯರ ಹೆಂಡಿರುಮಕ್ಕಳೆಲ್ಲಾ ಇದ್ದಾರೆ. ಕೊನೆಗೆ ಆ ಮಹನೀಯರನ್ನು ಒಂದಷ್ಟು ಜನ ಪಕ್ಕದಲ್ಲಿದ್ದ ಟಾಯ್ಲೆಟ್ ಕೋಣೆಗೆ ಕರೆದುಕೊಂಡು ಹೋಗಿ ಅಲ್ಲಿಂದಲೇ ವಿಜಯದ ಕಹಳೆ ಮೊಳಗಿಸಿದರು. ಆ ಸರ್ದಾರ್ಜಿ ಹೊರಬಂದಾಗ ಎಲ್ಲರೂ ತಬ್ಬಿದ್ದೇನು, ಚಿಯರ್ಸ್ ಹೇಳಿದ್ದೇನು. ಅಲ್ಲಿದ್ದ ಬಾಲ್ಡಿªಗಳಲ್ಲೇ ಸುಮಾರು ಕೆಟಗರಿಗಳಿತ್ತು- ಮೂನ್ ಶೈನ್, ಸನ್ ಶೈನ್, ವಿಲ್ ಶೈನ್…
ಹಸ್ತಸಾಮುದ್ರಿಕೆ ಎನ್ನುವುದನ್ನೇ ಈ ಸಂಘ ಗೇಲಿ ಮಾಡುತ್ತಿತ್ತು. ಏಕೆಂದರೆ, ಈ ಸಂಘದ ಸದಸ್ಯರ ಥಿಯರಿ ಪ್ರಕಾರ ಭವಿಷ್ಯ ಹುಡುಕಲು ಕೈಯನ್ನೇ ನೋಡ ಬೇಕಾದ್ದೇನಿಲ್ಲವಂತೆ. ಫಳ ಫಳ ಹೊಳೆ ಯುವ ತಲೆ ನೋಡಿದರೆ ಸಾಕು ಎನ್ನುವುದು ಎಲ್ಲರ ನಂಬಿಕೆಯಾಗಿತ್ತು. ಈ ಸಂಘದ ಅತಿ ಹಿರಿಯ ಸದಸ್ಯರಾದ ಉದ್ಯಮಿ ಕೆ. ಜಿ. ಕೋಸ್ಲಾ ಯಾವಾಗಲೂ ಹೇಳುತ್ತಿದ್ದರು. ಮುಂದೆ ಬಾಲ್ಡಿ ಆಗಿದ್ದರೆ ಆತ ಚಿಂತಕ, ಹಿಂದೆ ಬಾಲ್ಡಿ ಆಗಿದ್ದರೆ ರಸಿಕ. ಹಿಂದೆ ಮುಂದೆ ಎರಡೂ ಬಾಲ್ಡಿ ಆಗಿದ್ದವರು ಚಿಂತಕ – ರಸಿಕರು… ಹೀಗೆ. ಆಹಾ ಎನ್ನದೆ ನನಗೇನು ಬೇರೆ ದಾರಿಯಿದೆ? ಹೀಗಿರುತ್ತಲೊಂದು ದಿನ ಈ ಸಂಘಕ್ಕೆ ಹೊಳೆದು ಹೋಯ್ತು. ಜಗತ್ತಿನ ಬಾಲ್ಡಿಗಳೇ ನೀವು ಕಳೆದುಕೊಳ್ಳುವುದೇನಿಲ್ಲ ಎಂದು ಹೇಳಿದ್ದು ಆಗಿದೆ. ಹಾಗಾದರೆ ಕಳೆದುಕೊಳ್ಳುವವರಾದರೂ ಯಾರು ಅಂತ ಯೋಚಿಸಿದಾಗ ಫಕ್ಕನೆ ಹೊಳೆದದ್ದು ಯಸ್ ! ನಿಮ್ಮ ಊಹೆ ಸರಿ ಅದು- ûೌರಿಕರು.
ಹೀಗೆಲ್ಲ ಓದುತ್ತ ಓದುತ್ತ ಕುಳಿತಾಗ ನನ್ನ ಎದುರಿದ್ದ ಫೋನ್ “ಟ್ರಿಣ್’ ಎಂದಿತು. ಫೋನ್ ಎತ್ತಿದೆ. ಆ ಕಡೆ ಇದ್ದವರು, “”ಏನು ಗೊತ್ತಾ ನಮ್ಮ ರಾಮೋಜಿ ಫಿಲಂ ಸಿಟಿಗೆ ಸಿಹಿಕಹಿ ಚಂದ್ರು ಬಂದಿ¨ªಾರೆ, ಸೀರಿಯಲ್ ಡಿಸ್ಕಷನ್‌ಗೆ” ಎಂದರು. ನಾನು ಆಗ ಈಟಿವಿ ಚಾನಲ್‌ನ ಸುದ್ದಿ ವಿಭಾಗದ ಮುಖ್ಯಸ್ಥ. ಹಾಗೆ ಬೆಂಗಳೂರಿನಿಂದ ಬಂದ ಯಾರೇ ಆದರೂ ನಮ್ಮ ಹುಡುಗರ ಬಳಿ ಕರೆತರುತ್ತಿ¨ªೆ. ತೆಲುಗುವೀಡಿನಲ್ಲಿ ಒಂದಷ್ಟು ಕನ್ನಡದಲ್ಲಿ ಮಾತಾಡಿ ಬರ ತೀರಿಸಿಕೊಳ್ಳಲಿ ಅಂತ. ಹಾಗೆ ಬಂದ ಸಿಹಿಕಹಿ ಚಂದ್ರುಗೆ ಒಬ್ಬ ಹುಡುಗ, ಸೊಂಪುಗೂದಲಿನವ ಕೇಳಿಯೇಬಿಟ್ಟ- “”ನಿಮ್ಮ ಬಾಲ್ಡಿ ತಲೆಯ ರಹಸ್ಯವೇನು?” ಅಂತ. ಚಂದ್ರು ಹಿಂದೆ ಮುಂದೆ ನೋಡಲೇ ಇಲ್ಲ. “”ಸಿಂಪಲ…, ಕೂದಲು ಸೊಂಪಾಗಿ ಬೆಳೆಯಲು ಗೊಬ್ಬರ ಬೇಕು. ಯಾರ ತಲೆಯಲ್ಲಿ ಗೊಬ್ಬರ ತುಂಬಿದೆಯೋ ಅವರಿಗೆ ಕೂದಲಿದೆ. ನನ್ನ ತಲೆಯಲ್ಲಿ ಗೊಬ್ಬರ ಇಲ್ಲ. ಹಾಗಾಗಿ ನಾನು ಬಾಲ್ಡಿ” ಎಂದರು. ಸುತ್ತ¤ ಇದ್ದವರೆಲ್ಲಾ ಶಾಕ್ ಆಗಿ ನಿಂತಿದ್ದರು. ಒಂದೇ ಒಂದು ದನಿ “ಹೋ’ ಎಂದು ಚಪ್ಪಾಳೆ ತಟ್ಟಿ ಹರ್ಷೋದ್ಗಾರ ಮಾಡುತ್ತಿತ್ತು. ಆ ದನಿ ಯಾರದು ಎಂದು ಸುತ್ತಾ ನೋಡಿದೆ. ಅದು ನನ್ನದೇ! – ಜಿ. ಎನ್. ಮೋಹನ್