Advertisement

ಸದೃಢ ರಾಷ್ಟ್ರಕ್ಕೆ ವಿವೇಕವಾಣಿ ಅಗತ್ಯ

10:20 AM Jan 16, 2022 | Team Udayavani |

ಜೇವರ್ಗಿ: ಯಾವುದೇ ರಾಷ್ಟ್ರದ ಅಭಿವೃದ್ಧಿಯಲ್ಲಿ ಅಲ್ಲಿನ ಯುವಕರ ಪಾತ್ರ ತುಂಬಾ ಪ್ರಮುಖವಾಗಿದೆ. ಇಡೀ ಯುವ ಸಮೂಹದ ಚೇತನಾ ಶಕ್ತಿಯಾದ ವಿವೇಕಾನಂದರು ನೀಡಿದ ಸಂದೇಶವನ್ನು ಪ್ರತಿಯೊಬ್ಬ ಯುವಕರೂ ಅಳವಡಿಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಪ್ರಾಚಾರ್ಯ ಮೊಹಮ್ಮದ್‌ ಅಲ್ಲಾ ಉದ್ದೀನ್‌ ಸಾಗರ ಹೇಳಿದರು.

Advertisement

ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ಘಟಕದ ವತಿಯಿಂದ ಏರ್ಪಡಿಲಾಗಿದ್ದ “ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆ-ರಾಷ್ಟ್ರೀಯ ಯುವ ದಿನಾಚರಣೆ’ ಉದ್ಘಾಟಿಸಿ ಅವರು ಮಾತನಾಡಿದರು.

ಎನ್‌ಎಸ್‌ಎಸ್‌ ಅಧಿಕಾರಿ ಎಚ್‌.ಬಿ.ಪಾಟೀಲ ಮಾತನಾಡಿ, ಯುವಕರು ಪುರುಷ ಸಿಂಹಗಳಾಗಬೇಕು. ಪರಾವಲಂಬಿಗಳಾಗಬಾರದು. ನಿಮ್ಮ ಬದುಕಿನ ಶಿಲ್ಪಿಗಳು ನೀವೇ ಎಂದು ಪ್ರತಿಪಾದಿಸುತ್ತಿದ್ದ ಸ್ವಾಮಿ ವಿವೇಕಾನಂದರು, ಯುವ ಜನರಿಗೆ ನೀಡಿರುವ ಸಂದೇಶಗಳು ಜೀವನ ಧರ್ಮವಾಗಿದೆ ಎಂದರು.

ಸ್ಥಳೀಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಶಿವಶರಣಪ್ಪ ಜೆ., ಉಪನ್ಯಾಸಕ ಸುರೇಶ, ಕಾಲೇಜಿನ ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್‌, ಶರಣಮ್ಮ ಭಾವಿಕಟ್ಟಿ, ರವೀಂದ್ರಕುಮಾರ ಬಟಗೇರಿ, ಶಂಕ್ರೆಪ್ಪ ಹೊಸದೊಡ್ಡಿ, ಮಂಜುನಾಥ ಎ.ಎಂ., ಪ್ರಥಮ ದರ್ಜೆ ಸಹಾಯಕ ನೇಸರ ಎಂ.ಬೀಳಗಿ, ಅತಿಥಿ ಉಪನ್ಯಾಸಕರಾದ ರಂಜಿತಾ ಠಾಕೂರ್‌, ಲಾಡ್ಲೆಮಶಾಕ್‌ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next