Advertisement

ಆಂಧ್ರ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

11:05 AM Jun 24, 2018 | Team Udayavani |

ಬೆಂಗಳೂರು: ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ಸಾಯಿಶ್ರೀ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

Advertisement

ಮೊದಲ ವರ್ಷದ ಎಂಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಸಾಯಿಶ್ರೀ, ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ತೆರಳಿ, ತರಗತಿ ಮುಗಿಸಿಕೊಂಡು ಮಧ್ಯಾಹ್ನ ಹಾಸ್ಟೆಲ್‌ಗೆ ವಾಪಸ್‌ ಬಂದ ನಂತರ ನೇಣಿಗೆ ಶರಣಾಗಿದ್ದಾರೆ. ಸಹಪಾಠಿಗಳು ಕೊಠಡಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ವಿದ್ಯಾರ್ಥಿನಿ ಪೋಷಕರು ಕೂಡ ಯಾರ ಮೇಲೂ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ರಾಜಗೋಪಾಲನಗರ ಠಾಣೆಯಲ್ಲಿ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next