Advertisement

A.T. Ramaswamy; ವಿಧಾನಸಭಾ ಚುನಾವಣೆಯಿಂದ ಎ.ಟಿ.ರಾಮಸ್ವಾಮಿ ವಿಮುಖ ?

09:33 PM Apr 05, 2023 | Team Udayavani |

ಹಾಸನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಮುನ್ಸೂಚನೆ ನೀಡಿದ್ದಾರೆ.

Advertisement

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವ ಬಗ್ಗೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈ ಬಾರಿ ಅರಕಲಗೂಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದರೂ ತಮಗೆ ಪೂರಕ ವಾತಾವರಣ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡಿರುವ ರಾಮಸ್ವಾಮಿ, ಬಿಜೆಪಿ ಅಭ್ಯರ್ಥಿಯಾಗಲು ಸಜ್ಜಾಗಿರುವ ಯೋಗಾ ರಮೇಶ್‌ ಅವರಿಗೆ ತೊಂದರೆ ಮಾಡುವುದಿಲ್ಲ ಎಂದು ವರಿಷ್ಠರ ಮುಂದೆ ಹೇಳಿದ್ದಾರೆನ್ನಲಾಗಿದೆ.

ಹಾಗಾಗಿ ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ವರಿಷ್ಠರು ನೀಡಿದ ಸಲಹೆಗೆ ಎ.ಟಿ.ರಾಮಸ್ವಾಮಿ ಸಮ್ಮತಿಸಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next