Advertisement

ತಮಿಳುನಾಡು ಮೂಲದ ಯುವತಿ ಆತ್ಮಹತ್ಯೆ

12:36 PM Dec 04, 2017 | Team Udayavani |

ಬೆಂಗಳೂರು: ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ತಮಿಳುನಾಡು ಮೂಲದ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಟಿಎಂ ಲೇಔಟ್‌ನ ಪಿಜಿಯೊಂದರಲ್ಲಿ ಶನಿವಾರ ರಾತ್ರಿ ನಡೆದಿದೆ. ತಮಿಳುನಾಡಿನ ಫೈಬೀನಾ (30) ಮೃತ ಯುವತಿ.

Advertisement

ತಮಿಳುನಾಡಿನ ತಿರುವಣ್ಣಮಲೈ ಮೂಲದವರಾದ ಫೈಬೀನಾ, ಹೋಟೆಲ್‌ ಮ್ಯಾನೇಜ್‌ಮೆಂಟ್‌ ವಿದ್ಯಾಭ್ಯಾಸ ಪೂರೈಸಿದ್ದು, ಒಂದು ತಿಂಗಳ ಹಿಂದಷ್ಟೇ ಕೆಲಸ ಅರಸಿ ನಗರಕ್ಕೆ ಬಂದು ಬಿಟಿಎಂ ಲೇಔಟ್‌ನ 2ನೇ ಹಂತದಲ್ಲಿರುವ ದಿವ್ಯಾ ಎಂಬ ಪಿಜಿಯಲ್ಲಿ ವಾಸವಿದ್ದರು. ಶನಿವಾರ ರಾತ್ರಿ ಫೈಬೀನಾ ಊಟ ಮಾಡದೇ ಕೊಠಡಿಯ ಬಾಗಿಲು ಹಾಕಿಕೊಂಡಿದ್ದರು.

ಜತೆಗಿದ್ದ ಸ್ನೇಹಿತೆಯರು ಕೂಗಿದರೂ ಬಾಗಿಲು ತೆರೆದಿಲ್ಲ. ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಮೈಕೋ ಲೇಔಟ್‌ ಠಾಣೆಯಲ್ಲಿ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next