Advertisement

ಬ್ಯಾರೇಜ್‌ ಹಾನಿ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ

02:55 PM Dec 21, 2019 | Team Udayavani |

ಹೊಸದುರ್ಗ: ತಾಲೂಕಿನಲ್ಲಿ ಮಳೆಹಾನಿ ಯಿಂದ ಕೆಲ್ಲೋಡು ಬ್ಯಾರೇಜ್‌ ದಡವು ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಪಾಂಡೆ ನೇತೃತ್ವದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Advertisement

ಶುಕ್ರವಾರ ಸಂಜೆ ಉಸ್ತುವಾರಿ ಕಾರ್ಯದರ್ಶಿ ಪಂಕಜ್‌ ಕುಮಾರ್‌ ಪಾಂಡೆ ಕೆಲ್ಲೋಡು ಹಾನಿಗೊಳಗಾದ ಕೆಲ್ಲೋಡು ಬ್ಯಾರೇಜ್‌ ಜೊತೆಯಲ್ಲಿ ನೀರಿನ ಕೊರೆತದಿಂದ ಉಂಟಾದ ಹೊಲದ ಸ್ಥಿತಿಗತಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ ಸೇರಿದಂತೆ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ಸಂಬಂಧಿಸಿದ ರೈತರ ಅರ್ಜಿ ಪರಿಶೀಲಿಸಿ ಜಿಲ್ಲಾ ಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ವರದಿ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿದರು. ಕೆಲ್ಲೋಡು ಬ್ಯಾರೇಜ್‌ನ ದುರಸ್ತಿಯನ್ನು ತಾತ್ಕಾಲಿಕವಾಗಿ ಮಾಡಲಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಮಾತ್ರ ನೀರು ಶೇಖರಣೆಯಾಗಲಿದೆ. ವಿವಿ ಸಾಗರಕ್ಕೆ ನೀರು ಹರಿಯುತ್ತಿರುವುದರಿಂದ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಉಮೇಶ್‌ ಅಧಿಕಾರಿಗಳ ತಂಡಕ್ಕೆ ತಿಳಿಸಿದರು. ಈ ಬಗ್ಗೆ ಸರ್ಕಾರಕ್ಕೆ ಕೈಗೊಳ್ಳಬಹುದಾದ ಕ್ರಮದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಜಿಪಂ ಸಿಇಒ ಸತ್ಯಭಾಮ, ತಹಶೀಲ್ದಾರ್‌ ತಿಪ್ಪೇಸ್ವಾಮಿ, ತಾಪಂ ಇಒ ಜಾನಕಿರಾಂ, ಪುರಸಭೆ ಮುಖ್ಯಾಧಿಕಾರಿ ಉಮೇಶ್‌, ಇಂಜಿನಿಯರ್‌ಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next