Advertisement

ರಾಜ್ಯಕ್ಕೆ ಚುನಾವಣ ಆಯೋಗದ ಹಿರಿಯ ಅಧಿಕಾರಿಗಳ ತಂಡ ಭೇಟಿ

10:28 PM Feb 11, 2023 | Team Udayavani |

ಬೆಂಗಳೂರು: ವಿಧಾನ ಸಭೆ ಚುನಾವಣೆಗೆ ಕೇಂದ್ರ ಚುನಾವಣ ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನು ಪ್ರಾರಂಭಿಸಿದ್ದು, ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆ ಗಾಗಿ ಕೇಂದ್ರ ಚುನಾವಣ ಆಯೋಗದ 3 ತಂಡಗಳು ರಾಜ್ಯ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಿವೆ.

Advertisement

ಜಿಲ್ಲಾ ಮಟ್ಟದಲ್ಲಿ ಕೈಗೊಂಡಿರುವ ಚುನಾವಣೆ ಸಿದ್ಧತೆ, ಮತದಾರರ ಪಟ್ಟಿ ಮತ್ತಿತರ ಪ್ರಕ್ರಿಯೆ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ಮಾಡಿ ಸಮಾಲೋಚಿಸಿ ಇವಿಎಂ ಮತ್ತು ವಿವಿಪ್ಯಾಟ್‌ಗಳ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದೆ.

ಈ ಪ್ರವಾಸದಲ್ಲಿ ಪ್ರಮುಖವಾಗಿ ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಅತ್ಯಂತ ಕಡಿಮೆ ಮತದಾನ ನಡೆದಿರುವ ಮತಗಟ್ಟೆಗಳನ್ನು ಗುರುತಿಸುವುದು, ಕಡಿಮೆ ಮತದಾನಕ್ಕೆ ಕಾರಣಗಳನ್ನು ಕಂಡು ಹಿಡಿದು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿಯುವುದು, ಮತದಾನದ ಜಾಗೃತಿ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸುವುದು. ಹೊಸ ತಂತ್ರಜ್ಞಾನ ಬಳಸಿಕೊಳ್ಳುವ ಮೂಲಕ ಹೆಚ್ಚಿನ ಯುವ ಮತದಾರರನ್ನು ಸೆಳೆಯುವ ಬಗ್ಗೆ ಚರ್ಚಿಸಲಾಯಿತು.

ಕೇಂದ್ರ ಚುನಾವಣ ಆಯೋಗದ ಉಪ ಮುಖ್ಯ ಆಯುಕ್ತರಾದ ಅಜಯ್‌ ಬಾಡು ಅವರ ನೇತೃತ್ವದ ತಂಡ ಯಾದಗಿರಿ ಜಿಲ್ಲೆಗೆ ಬೇಟಿ ನೀಡಿ ಕಲಬುರಗಿ ವಲಯದ ಜಿಲ್ಲಾಧಿಕಾರಿಗಳೊಂದಿಗೆ ಚುನಾವಣ ಪೂರ್ವ ತಯಾರಿ ಕುರಿತಂತೆ ಸಭೆ ನಡೆಸಿದರು. ಈ ತಂಡದ ಜತೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಮತ್ತು ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್‌ ಭಾಗವಹಿಸಿದ್ದರು.

ಆಯೋಗದ ನಿರ್ದೇಶಕರಾದ ಶುಭ್ರ ಸಕ್ಸೇನಾ ಹಾಗೂ ಕಾರ್ಯದರ್ಶಿ ಬಿ.ಸಿ ಪಾತ್ರ ನೇತೃತ್ವದ ತಂಡ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ತಂಡದ ಜತೆಗೆ ರಾಜ್ಯ ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್‌ ಕುಮಾರ್‌ ಭಾಗವಹಿಸಿದ್ದರು.

Advertisement

ಆಯೋಗದ ಸ್ವೀಪ್‌ ನಿರ್ದೇಶಕರಾದ ಸಂತೋಷ್‌ ಅಜೆ¾àರ ಅವರ ನೇತೃತ್ವದ ತಂಡ ಮತದಾರರ ಜಾಗೃತಿಯ ರಾಜ್ಯ ಸ್ವೀಪ್‌ ಕಾರ್ಯಕ್ರಮಗಳ ಪೂರ್ವತಯಾರಿ ಕುರಿತಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್‌ ನೋಡಲ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸ್ವೀಪ್‌ ನೋಡೆಲ್‌ ಅಧಿಕಾರಿ ಪಿ.ಎಸ್‌ ವಸ್ತ್ರದ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next