Advertisement
ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 15 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಗಳನ್ನು ಚಿಂತಾಮಣಿ ತಾಲೂಕಿನ ಮುರಗಮಲ್ಲ ನಿವಾಸಿಗಳಾದ ಟಾಟಾಕ ಶೌಬಾಜ್ ಬಿನ್ ತಾಜ್‌ದ್ ಖಾನ್ (19), ಸುರೇಶ್ ಬಿನ್ ಲಕ್ಷ್ಮೀನಾರಾಯಣಪ್ಪ (35), ಮರುಗಮಲ್ಲ ಸಮೀಪದ ಚಲುಮಕೋಟೆ ನಿವಾಸಿ ಕೃಷ್ಣಪ್ಪ ಬಿನ್ ಅವುಲು ಸುಬ್ಬನ್ನ (45), ಬೈನಹಳ್ಳಿ ನಿವಾಸಿ ವೆಂಕಟರವಣಪ್ಪ ಬಿನ್ ಲೇಟ್ ಮುನಿಸ್ವಾಮಿ (50), ದಂಡುಪಾಳ್ಯದ ನಾರಾಯಣಸ್ವಾಮಿ ಬಿನ್ ಕದಿರಪ್ಪ (55), ಚಿಂತಾಮಣಿ ಸಮೀಪದ ಕೋನಪಲ್ಲಿ ನಿವಾಸಿ ತಿಮ್ಮಯ್ಯ ಬಿನ್ ಗಂಗಪ್ಪ (68), ಕೋಲಾರದ ಗೌರಮ್ಮ(45) ಎಂದು ಗುರುತಿಸಲಾಗಿದೆ.
Related Articles
Advertisement
ಬಸ್‌ನಲ್ಲಿದ್ದ 15 ಮಂದಿಗೆ ಗಾಯ: ಅಪಘಾತದಲ್ಲಿ ಮರುಗಮಲ್ಲದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿದ್ದ ಸುಮಾರು 15 ಮಂದಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಬಸ್ ಚಾಲಕ ಸೇರಿ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಳುಗಳನ್ನು ತಕ್ಷಣ ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆ, ಆರ್.ಎಲ್.ಜಾಲಪ್ಪ ಆಸ್ಪತ್ರೆ, ಬೆಂಗಳೂರಿನ ನಿಮ್ಹಾನ್ಸ್, ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಗಾಯಗೊಂಡವರಿಗೆ ಯಾವುದೇ ಪ್ರಾಣಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ವಲಯದ ಐಜಿ ಶರತ್‌ಚಂದ್ರ ಭೇಟಿ: ಕೇಂದ್ರ ವಲಯದ ಐಜಿಪಿ ಕೆ.ವಿ.ಶರತ್‌ಚಂದ್ರ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಲ್ಲಿಂದ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದವರ ಯೋಗಕ್ಷೇಮ ವಿಚಾರಿಸಿದರು.
ಡೀಸಿ ಭೇಟಿ ರಕ್ಷಣಾ ಕಾರ್ಯಕ್ಕೆ ನೆರವು: ಅಪಘಾತ ವಿಷಯ ತಿಳಿದ ಕೂಡಲೇ ಜಿಲ್ಲಾ ಕೇಂದ್ರದಲ್ಲಿದ್ದ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಸಂತೋಷಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಪ್ರತ್ಯಕ್ಷದರ್ಶಿಗಳಿಂದಲೂ ಅಪಘಾತದ ಬಗ್ಗೆ ಮಾಹಿತಿ ಪಡೆದು ರಕ್ಷಣಾ ಕಾರ್ಯಕ್ಕೆ ನೆರವಾದರು. ಬಳಿಕ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಳುಗಳ ಯೋಗಕ್ಷೇಮ ವಿಚಾರಿಸಿದರು.
ಶಾಸಕ ಕೃಷ್ಣಾರೆಡ್ಡಿ ಭೇಟಿ, ಪರಿಹಾರ ವಿತರಣೆ: ಭೀಕರ ರಸ್ತೆ ಅಪಘಾತ ನಡೆದು 11 ಮಂದಿ ಅಮಾಯಕ ಪ್ರಯಾಣಿಕರು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ವಿಧಾನಸಭಾ ಉಪಸಭಾಧ್ಯಕ್ಷರಾದ ಕ್ಷೇತ್ರದ ಶಾಸಕ ಎಂ.ಕೃಷ್ಣಾರೆಡ್ಡಿ ಚಿಂತಾಮಣಿಗೆ ದಿಢೀರ್ ಆಗಮಿಸಿದರು. ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಅಲ್ಲದೇ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಿಗೆ ಚಿಕಿತ್ಸೆ ವೆಚ್ಚಕ್ಕಾಗಿ ಪರಿಹಾರ ವಿತರಿಸಿದರು.
ಟಾಟಾಏಸ್‌ನಲ್ಲಿ 12 ಮಂದಿಯಲ್ಲಿ ಓರ್ವ ಪಾರು: ಟಾಟಾಏಸ್‌ನಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದು ಒಬ್ಬರು ಮಾತ್ರ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಟಾಟಾಏಸ್ ಮುಂಬದಿ ಸಂಪೂರ್ಣ ಜಖಂಗೊಂಡಿದ್ದರಿಂದ ಮೃತ ದೇಹಗಳು ವಾಹನದೊಳಗೆ ಸಿಲುಕಿ ಹೊರ ತೆಗೆಯಲಾರದ ಸ್ಥಿತಿಯಲ್ಲಿದ್ದವು. ಕೆಲವೊಂದು ಸ್ಥಳದಲ್ಲಿಯೇ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯಗಳು ಮನಕಲಕುವಂತಿದ್ದವು. ಸ್ಥಳೀಯರು ಧಾವಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಪೊಲೀಸರಿಗೆ ನೆರವಾದರು.
ಜಿಲ್ಲೆಯ ಚಿಂತಾಮಣಿ ಸಮೀಪ ಖಾಸಗಿ ಬಸ್ ಹಾಗೂ ಟಾಟಾಏಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿ 11 ಮಂದಿ ಮೃತ ಪಟ್ಟಿದ್ದಾರೆ. ಘಟನೆಗೆ ಚಾಲಕನ ಅಜಾಗರೂಕತೆ ಹಾಗೂ ಅತಿವೇಗ ಕಾರಣ. ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನನ್ನು ಶೀಘ್ರ ಬಂಧಿಸುತ್ತೇವೆ. ಬಸ್ ಮಾಲಿಕನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ.-ಕೆ.ಸಂತೋಷಬಾಬು, ಜಿಲ್ಲಾ ಎಸ್ಪಿ