ನೀರು ಹರಿದುಬರುತ್ತಿದೆ. ಒಳ ಹರಿವಿನ ಪ್ರಮಾಣವನ್ನು ಗಮನದಲ್ಲಿರಿಸಿಕೊಂಡು ನಾಲ್ಕು ಕ್ರಸ್ಟ್ಗೇಟ್ಗಳ ಮೂಲಕ ಒಂದು ಸಾವಿರ ಹಾಗೂ ವಿದ್ಯುತ್ ಘಟಕದ ಮೂಲಕ 1,000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗು ತ್ತಿದೆ. ಅಲ್ಲದೆ ಮುಖ್ಯ ನಾಲೆಗೆ 1,600 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.
Advertisement
ಶಾಸಕರ ಸೂಚನೆಅಣೆಕಟ್ಟು ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಹೆಚ್ಚುವರಿಯಾಗಿ ನೀರನ್ನು ಸಂಗ್ರಹ ಮಾಡದೆ ಅಧಿಕ ನೀರನ್ನು ನದಿಗೆ ಹರಿಸುವಂತೆ ಶಾಸಕ ಅಪ್ಪಚ್ಚು ರಂಜನ್ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನೀರಾವರಿ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುತ್ತಿದ್ದು ಹೆಚ್ಚುವರಿ ನೀರಿನ್ನು ನದಿಗೆ ಹರಿಸಲಾಗುವುದು ಎಂದು ಸ. ಕಾರ್ಯಪಾಲಕ ಅಭಿಯಂತ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.