Advertisement

ಇಂದಿನಿಂದ ಮೂರು ದಿನ ವಿಧಾನಮಂಡಲ ಅಧಿವೇಶನ

11:07 PM Oct 09, 2019 | Lakshmi GovindaRaju |

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ರಾಜ್ಯ ಸರ್ಕಾರ ಪ್ರಮುಖವಾಗಿ ಹಣಕಾಸು ವಿಧೇಯಕ ಅಂಗೀಕಾರ ಮಾಡಿಕೊಳ್ಳಲು ಮಾತ್ರ ಅಧಿವೇಶನ ನಡೆಸುತ್ತಿದೆ. ಈ ಮಧ್ಯೆ, ಪ್ರವಾಹ ಪರಿಹಾರ ಹಾಗೂ ಆಡಳಿತ ವೈಫ‌ಲ್ಯವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸನ್ನದ್ಧಗೊಂಡಿವೆ.

Advertisement

ಸದನದ ಆರಂಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಡೆಯಲಿದ್ದು, ನಂತರ ಸದನದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ವರದಿ ಮಂಡನೆ ಮಾಡಲಿದ್ದಾರೆ. ಅಲ್ಲದೆ, ಯಡಿಯೂರಪ್ಪ ಈ ಹಣಕಾಸು ವರ್ಷದ ಉಳಿದ ಅವಧಿಗೆ ಸರ್ಕಾರದ ಚಟುವಟಿಕೆ ನಡೆಸಲು ಸದನದ ಒಪ್ಪಿಗೆ ಪಡೆಯಲು ಹಣಕಾಸು ವಿಧೇಯಕ ಮಂಡನೆ ಮಾಡಲಿದ್ದಾರೆ.

ಆದರೆ, ಪ್ರತಿಪಕ್ಷಗಳು ಆರಂಭದಲ್ಲಿಯೇ ರಾಜ್ಯ ಸರ್ಕಾರ ಕೇವಲ ಮೂರೇ ದಿನ ಅಧಿವೇಶನ ನಡೆಸುತ್ತಿರುವುದನ್ನು ಖಂಡಿಸಿ ಸದನವನ್ನು ವಿಸ್ತರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ತೀರ್ಮಾನಿಸಿವೆ. ಅಲ್ಲದೆ, ಪ್ರವಾಹ ಪರಿಹಾರವನ್ನು ಸಮರ್ಪಕವಾಗಿ ನೀಡದಿರುವುದನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬೀಳಲು ತೀರ್ಮಾನಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next