Advertisement

ಕಮರಿಗೆ ಉರುಳಿದ ಬಸ್ಸು : 21 ಸಾವು ; ಹಲವರಿಗೆ ಗಾಯ

08:28 AM Oct 01, 2019 | Team Udayavani |

ಅಹಮದಾಬಾದ್: 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಗುಜರಾತ್ ನ ಬನಸ್ಕಾಂತ ಜಿಲ್ಲೆಯಲ್ಲಿನ ಅಂಬಾಜಿ ಪಟ್ಟಣದ ಸಮೀಪ ಕಡಿದಾದ ತಿರುವಿನಲ್ಲಿ ಉರುಳಿಬಿದ್ದ ಪರಿಣಾಮ ಸುಮಾರು 21 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Advertisement

ಇಲ್ಲಿನ ತ್ರಿಶುಲಿಯಾ ಘಾಟ್ ಭಾಗದಲ್ಲಿ ಸಂಚರಿಸುತ್ತಿದ್ದ ಈ ಐಶಾರಾಮಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ 14 ಜನ ಪುರುಷರು, ಮೂವರು ಮಹಿಳೆಯರು ಮತ್ತು ನಾಲ್ಕು ಜನ ಮಕ್ಕಳು ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳಲ್ಲಿ ಐವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಅಪಘಾತ ಸ್ಥಳಕ್ಕೆ ಆ್ಯಂಬುಲೆನ್ಸ್ ಮತ್ತು ಪೊಲೀಸರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನು ಉರುಳಿಬಿದ್ದಿರುವ ಬಸ್ಸಿನ ಅಡಿಯಲ್ಲಿ ಸಿಲುಕಿಕೊಂಡಿರುವವರನ್ನು ರಕ್ಷಿಸುವ ಕಾರ್ಯದಲ್ಲಿ ಸ್ಥಳೀಯರು ಹಾಗೂ ಪೊಲೀಸರು ನಿರತರಾಗಿದ್ದಾರೆ.

ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದ ಕಾರಣ ಜಾರುತ್ತಿದ್ದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಉರುಳಿಬಿದ್ದಿತೆಂದು ತಿಳಿದುಬಂದಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next