Advertisement
ಪ್ರಧಾನಿ ಮೋದಿ ಅಚ್ಛೆ ದಿನ್ ಆಯೇಗಾ ಎಂದು ನಾಲ್ಕು ವರ್ಷ ದೇಶದ ಜನರನ್ನು ವಂಚಿಸಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಯಾವೊಂದು ಭರವಸೆ ಈಡೇರಿಸಿಲ್ಲ. ಆದರೆ, ಈಗ ಯಶಸ್ವಿ ನಾಲ್ಕನೇ ವರ್ಷ ಸಂಭ್ರಮಾಚರಣೆ ಮಾಡುತ್ತಿರುವುದು ಜನರ ವಿಶ್ವಾಸಕ್ಕೆ ಮಾಡಿದ ದ್ರೋಹವಾಗಿದೆ. ಹೀಗಾಗಿ ಈ ದಿನವನ್ನು ನಾವು ವಿಶ್ವಾಸಘಾತುಕ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದರು.
ದೇಶದ ಜನರನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ. ರಾಜ್ಯ ಜಲ ವಿವಾದಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸದೆ ರಾಜ್ಯದ ರೈತರನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ. ಹೀಗಾಗಿ ಈ ದಿನವನ್ನು ವಿಶ್ವಾಸಘಾತುಕ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಬೆಣ್ಣೆ, ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ ಪಾರಸಮಲ್
ಸುಖಾಣಿ, ನಗರಸಭೆ ಉಪಾಧ್ಯಕ್ಷ ಜಯಣ್ಣ, ಜಿ.ಬಸವರಾಜ ರೆಡ್ಡಿ, ಕೆ.ಶಾಂತಪ್ಪ, ರುದ್ರಪ್ಪ ಅಂಗಡಿ, ಜಿ.ಶಿವಮೂರ್ತಿ, ಅಬ್ದುಲ್ ಕರೀಂ, ಅಮರೇಗೌಡ ಹಂಚಿನಾಳ, ದರೂರು ಬಸವರಾಜ ಪಾಟೀಲ, ವಸಂತಕುಮಾರ್ ಅರೋಲಿ ಸೇರಿ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.