Advertisement

ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಸೂಕ್ತ: ಸಚಿವ ಕೆ.ಎಸ್. ಈಶ್ವರಪ್ಪ ಇಂಗಿತ

12:09 PM Jan 23, 2021 | Team Udayavani |

ಧಾರವಾಡ:  ರಾಜ್ಯದಲ್ಲಿ  ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ಜಿಲ್ಲಾ ಪಂಚಾಯಿತಿ ಆವರಣದಲ್ಲಿ 1.4 ಕೋಟಿ  ರೂ.ವೆಚ್ಚದಲ್ಲಿ ನಿರ್ಮಿಸಿರುವ ಅಧ್ಯಕ್ಷ, ಉಪಾಧ್ಯಕ್ಷರು, ಸ್ಥಾಯಿ ಸಮಿತಿಗಳ ಅಧ್ಯಕ್ಷರ ನೂತನ ಕೊಠಡಿಗಳ ಕಟ್ಟಡ ಉದ್ಘಾಟಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ರಾಮ ಮತ್ತು ಜಿಲ್ಲಾ ಪಂಚಾಯತ್ ವ್ಯವಸ್ಥೆ ಜಾರಿ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂವಿಧಾನ ತಿದ್ದುಪಡಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸುವ ಉದ್ದೇಶವಿದೆ ಎಂದರು.

ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಿಗೆ ಎರಡು ಹಂತದ ವ್ಯವಸ್ಥೆ ಜಾರಿಗೆ  ಸಂಪೂರ್ಣ ಸಹಮತವಿದೆ. ಸಂವಿಧಾನದಲ್ಲಿ ಮೂರು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಚಿಸಿರುವುದರಿಂದ ಅನುಷ್ಠಾನ ಅನಿವಾರ್ಯವಾಗಿದೆ. ಇದನ್ನು ಬದಲಾಯಿಸಲು ಕೋರಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಸಂವಿಧಾನಕ್ಕೆ ತಿದ್ದುಪಡಿಯಾದರೆ ಮಾತ್ರ ಬದಲಾವಣೆ ಸಾಧ್ಯ ಎಂದರು.

ಇದನ್ನೂ ಓದಿ:  ನೋಯ್ಡಾದಲ್ಲಿ ಜನವರಿ 31ರವರೆಗೂ “ಲಾಕ್ ಡೌನ್”’; ಸೆಕ್ಷನ್ 144 ಜಾರಿಗೊಳಿಸಿದ ಪೊಲೀಸರು

ಬೃಹತ್, ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ, ಸಿ.ಎಂ. ನಿಂಬಣ್ಣವರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ.ಸಿಇಓ ಡಾ.ಬಿ.ಸುಶೀಲಾ, ಸದಸ್ಯರಾದ ಚೈತ್ರಾ ಗುರುಪಾದಪ್ಪ ಶಿರೂರ, ರೇಣುಕಾ ಇಬ್ರಾಹಿಂಪುರ, ಚನ್ನಬಸಪ್ಪ ಮಟ್ಟಿ, ಕರಿಯಪ್ಪ ಮಾದರ ಮತ್ತಿತರರು ಇದ್ದರು.

Advertisement

ಇದನ್ನೂ ಓದಿ:  ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ, ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿ: BSY

Advertisement

Udayavani is now on Telegram. Click here to join our channel and stay updated with the latest news.

Next