Advertisement

ಡಾ| ಧನಂಜಯ ಸರ್ಜಿಯವರ ಗೆಲುವು; ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯ: ಯಶ್‌ಪಾಲ್‌ ಸುವರ್ಣ

11:52 PM Jun 07, 2024 | Team Udayavani |

ಉಡುಪಿ: ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಾ| ಧನಂಜಯ ಸರ್ಜಿಯವರ ಗೆಲುವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಗೆಲುವಾಗಿದ್ದು, ಈ ಮೂಲಕ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರೇ ದೊಡ್ಡ ಆಸ್ತಿ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದೊಂದಿಗೆ ಬೆಳೆದು ಬಂದ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಲವು ಗೊಂದಲಗಳ ನಡುವೆಯೂ ಧೃತಿಗೆಡದೆ ಹಗಲಿರುಳು ಶ್ರಮಿಸಿ ಡಾ| ಧನಂಜಯ ಸರ್ಜಿ ಹಾಗೂ ಮೈತ್ರಿ ಅಭ್ಯರ್ಥಿ ಭೋಜೇಗೌಡ ಅವರನ್ನು ಗೆಲ್ಲಿಸುವ ಮೂಲಕ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನರೇಂದ್ರ ಮೋದಿಯವರಿಗೆ ಗೆಲುವಿನ ಉಡುಗೊರೆ ನೀಡಿದ್ದಾರೆ.

ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಪ್ರಬುದ್ಧ ಮತದಾರರು ಸಜ್ಜನ ವ್ಯಕ್ತಿತ್ವದ ಡಾ| ಧನಂಜಯ ಸರ್ಜಿ ಹಾಗೂ ಕ್ರಿಯಾಶೀಲ ಅಭ್ಯರ್ಥಿ ಭೋಜೇಗೌಡರನ್ನು ತಮ್ಮ ಪ್ರತಿನಿಧಿಯಾಗಿ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರ ವಿಕಸಿತ ಭಾರತ ಸಂಕಲ್ಪಕ್ಕೆ ಮುನ್ನುಡಿ ಬರೆದಿದ್ದಾರೆ. ಪದವೀಧರ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ವಿಧಾನ ಪರಿಷತ್ತಿನಲ್ಲಿ ಶಾಸಕರು ಧ್ವನಿಯಾಗುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next