Advertisement
ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ಅಣಿಯಾದರೆ, ಲೀವರ (ಜಠರ) ಅನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬ್ ಹಾಗೂ ಎರಡೂ ಕಿಡ್ನಿಗಳನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಜೀರೋ ಟ್ರಾಫಿಕ್ ಮೂಲಕ ಕಳಿಸಿಕೊಡಲಾಯಿತು. ಪೊಲೀಸರು ಸಂಪೂರ್ಣವಾಗಿ ಜೀರೋ ಟ್ರಾಫಿಕ್ ಅಥವಾ ಗ್ರೀನ ಕಾರಿಡಾರ್ (ಹಸಿರು ಪಥ) ಮೂಲಕ ಅಂಗಾಂಗಗಳನ್ನು ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.
Related Articles
Advertisement
ಅಂಗಾಂಗಗಳನ್ನು ಸಾಗಿಸುವ ಕಾರ್ಯದಲ್ಲಿ ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ನೀಡಿದ ಸಹಕಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್ ಕಾರಿಡಾರ್ ನಿರ್ಮಿಸಿ ಅಂಗಾಂಗಗಳನ್ನು ಶೀಘ್ರ ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.
ಇದಕ್ಕೂ ಮೊದಲು ನಗರದ ವಿಜಯಾ ಆಸ್ಪತ್ರೆಯಲ್ಲಿ ಯುವಕನನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿಯೇ ಮೆದುಳು ಗಂಭೀರ ಸ್ಥಿತಿಗೆ ತಲುಪಿದಾಗ ವಿಜಯಾ ಆಸ್ಪತ್ರೆಯ ಡಾ| ರವಿ ಪಾಟೀಲ ಅವರ ತಂಡ, ಅಮಟೆ ಗ್ರಾಮದ ಹಿರಿಯ ಅರ್ಜುನ ಕಸಲೇಕರ, ಅಭಿಮನ್ಯು ಡಾಗಾ, ಸಮಾಜ ಸೇವಕ ವಿಜಯ ಮೋರೆ ಮೊದಲಾದವರು ಈ ಕಾರ್ಯದಲ್ಲಿ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಡಾ| ಬಸವರಾಜ ಬಿಜ್ಜರಗಿ ಉಪಸ್ಥಿತರಿದ್ದರು. ಅಂಗಾಂಗಗಳನ್ನು ದಾನ ಮಾಡಿದ ವ್ಯಕ್ತಿ ಹಾಗೂ ಆತನ ಕುಟುಂಬ ಸದಸ್ಯರ ಕಾರ್ಯವನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ| ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಎಂ ವಿ ಜಾಲಿ ಅಭಿನಂದಿಸಿದ್ದಾರೆ.