ಮೀರತ್: ತನ್ನ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ದುರುಳರ ವಿರುದ್ಧ ದೂರು ದಾಖಲಿಸಲು ಪ್ರಯತ್ನಿಸಿದ ಮಹಿಳೆ ಪೊಲೀಸರು ದೂರು ದಾಖಲಿಸಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಸುಮಾರು ಶೇ. 80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ಅವರನ್ನು ಗಾಜಿಯಾಬಾದ್‌ನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಘಾತಕಾರಿ ಅಂಶವೆಂದರೆ, ಆಕೆಯ ತಂದೆ, ಬೇರೊಬ್ಬ ಹೆಂಗಸಿನ ಜತೆ ಸೇರಿಕೊಂಡು ಆಕೆಯನ್ನು ಕೇವಲ 10,000 ರೂ.ಗಳ ಆಸೆಗೆ ಧನಿಕರೊಬ್ಬರಿಗೆ ಮನೆಗೆಲಸಕ್ಕಾಗಿ ಮಾರಿದ್ದರು. ಧನಿಕರ ಮನೆಯಲ್ಲಿ ಆಕೆಯ ಮೇಲೆ ಮನೆ ಮಾಲೀಕ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದರೆಂದು ಹೇಳಲಾಗಿದೆ. ದೆಹಲಿ ಮಹಿಳಾ ಹಕ್ಕುಗಳ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ತನಿಖೆಗೆ ಒತ್ತಾಯಿಸಿದ್ದರು.
Advertisement
10 ಸಾವಿರಕ್ಕೆ ಮಾರಾಟವಾಗಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನ
03:48 AM May 14, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.