Advertisement

ಕಲಬುರಗಿ: ಪ್ರವಾಹದಲ್ಲಿ ಕೊಚ್ಚಿಹೋದ ಮಹಿಳೆ, ಮೂರಕ್ಕೇರಿದ ಸಾವಿನ ಸಂಖ್ಯೆ

03:53 PM Oct 12, 2020 | keerthan |

ಕಲಬುರಗಿ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಾದ್ಯಂತ ಹಲೆವಡೆ ಪ್ರವಾಹ ಉಂಟಾಗಿದ್ದು, ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮದ ಹಳ್ಳದಲ್ಲಿ ಮಹಿಳೆಯೊಬ್ಬಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.

Advertisement

ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ (40) ಎಂಬ ಮಹಿಳೆ ಪ್ರವಾಹಕ್ಕೆ ಬಲಿಯಾಗಿದ್ದಾರೆ. ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಈಕೆಯ ಶವ ಮರವೊಂದಕ್ಕೆ ಸಿಲುಕಿದ ರೀತಿಯಲ್ಲಿ ಪತ್ತೆ ಮಾಡಲಾಗಿದೆ. ಈ ಕುರಿತು ಮಹಿಳೆಯ ಪುತ್ರ ದೂರು ನೀಡಿದ್ದು, ಗ್ರಾಮೀಣ ಸಿಪಿಐ ಶಂಕರಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ಡೋಣಿ ನದಿ ಪ್ರವಾಹ: ಮುನ್ನೆಚ್ಚರಿಕೆ ಕ್ರಮಕ್ಕೆ ಎಂ.ಬಿ.ಪಾಟೀಲ ಸೂಚನೆ

ಈ ಮಹಿಳೆ ಸಾವಿನೊಂದಿಗೆ ಜಿಲ್ಲೆಯಲ್ಲಿ ಪ್ರಸಕ್ತವಾಗಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದಂತಾಗಿದೆ. ಕಳೆದ ಸೆಪ್ಟೆಂಬರ್ 20ರಂದು ಇದೇ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದ ಬೀರಶೆಟ್ಟಿ ಹಣಮಂತ ಬೋಧನವಾಡಿ (28) ಎಂಬ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಮೃತಪಟ್ಟಿದ್ದ. ಅದೇ ರೀತಿ ಇತ್ತೀಚೆಗೆ ಆಳಂದ ತಾಲ್ಲೂಕಿನ ವೈಜಾಪುರ ಬೊಮ್ಮನಹಳ್ಳಿ ಮಧ್ಯದ ಹಳ್ಳದಲ್ಲಿ ಕಾರು ದಾಟಿಸಲು ಯತ್ನಿಸಿದ ಅಫಜಲಪುರದ ಜೆಸ್ಕಾಂ ಸಹಾಯಕ ಎಂಜಿನಿಯರ್ ಸಿದ್ದರಾಮ ಅವಟೆ ಅವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ಸಾವಿಗೀಡಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next