ಮೂಡಿಗೆರೆ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರು ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ನಡೆದಿದೆ.
ಕೂಲಿ ಕೆಲಸಕ್ಕೆ ಮೂಡಿಗೆರೆಗೆ ತೆರಳುತ್ತಿದ್ದ ಬಿಹಾರ ಮೂಲದ ಗರ್ಭಿಣಿ ಮಹಿಳೆಗೆ ಬಸ್ಸಿನಲ್ಲಿ ಸಂಚರಿಸುತ್ತಿದ್ದಾಗ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ, ವಿಷಯ ತಿಳಿದ ಕೂಡಲೇ ಚಾಲಕ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾನೆ, ಈ ವೇಳೆ ಗರ್ಭಿಣಿ ಮಹಿಳೆಗೆ ನಿರ್ವಾಹಕಿ ವಸಂತ ಹಾಗೂ ಬಸ್ಸಿನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರು ಸಹಾಯಕ್ಕೆ ಮುಂದಾಗಿದ್ದಾರೆ, ಗರ್ಭಿಣಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಇಬ್ಬರು ಆರೋಗ್ಯವಾಗಿದ್ದರೆ. ಬಳಿಕ ತಾಯಿ ಮತ್ತು ಮಗುವನ್ನು 108 ಅಂಬ್ಯಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವೇಳೆ ಮಹಿಳಾ ಕಂಡಕ್ಟರ್ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾದ ಮಹಿಳೆಗೆ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಕೆಎ-18 ಎಫ್-0865 ನಂಬರ್‌ನ ಸಾರಿಗೆ ಬಸ್ಸು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿತ್ತು. ತಾಯಿ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಬಸ್ಸು ತನ್ನ ಪ್ರಯಾಣ ಮುಂದುವರೆಸಿತು.
ಮಾನವೀಯತೆ ಮೆರೆದ ಸಾರಿಗೆ ಬಸ್‌ನ ಚಾಲಕ, ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಅಪಾರ ಮೆಚ್ಚುವೆ ವ್ಯಕ್ತವಾಗಿದೆ.
Related Articles
ಇದನ್ನೂ ಓದಿ: ಪೊಲೀಸರನ್ನು ಕಂಡ ಕೂಡಲೇ ಕೋರ್ಟ್ ಒಳಗೆ ಓಡಿ ಹೋದ ಇಮ್ರಾನ್ ಆಪ್ತ ಫವಾದ್ ಚೌಧರಿ: VIDEO