Advertisement

Kalaburagi; ಮಹಿಳೆಯ ಮಾಸಿಕ ಮುಟ್ಟು ಅಪಶಕುನ ಅಲ್ಲ: ದಿನೇಶ್ ಗುಂಡೂರಾವ್

03:48 PM Mar 07, 2024 | Team Udayavani |

ಕಲಬುರಗಿ: ಮಹಿಳೆಯರಿಗೆ ಮಾಸಿಕವಾಗಿ ಆಗುವ ಮುಟ್ಟು ಅಪಶಕುನ ಅಲ್ಲ. ಅದೊಂದು ನೈಸರ್ಗಿಕ ಕ್ರಿಯೆ. ಅದು ಅಶುದ್ಧವೂ ಅಲ್ಲ. ಈ ಹಂತದಲ್ಲಿ ಹೆಣ್ಣು ಮಕ್ಕಳಿಗೆ ಕುಟುಂಬ ಮತ್ತು ಗಂಡಸರೂ ಕೂಡ ಬೆಂಬಲ ಕೊಡಬೇಕಿದೆ. ಆಗಲೇ ಆಕೆಯ ಆರೋಗ್ಯ ನಳನಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಆರ್.ಗುಂಡೂರಾವ್ ಹೇಳಿದರು.

Advertisement

ನಗರದ ಪಿಡಿಎ ಕಾಲೇಜಿನ ಸಂಚೂನರಿ ಹಾಲ್‌ನಲ್ಲಿ ಗುರುವಾರ ಆರೋಗ್ಯ ಇಲಾಖೆ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೆಕೆಆರ್ ಡಿಬಿ ಸಹಯೋಗದಲ್ಲಿ ಪ್ರೇರಣಾ ಮತ್ತು ಆಶಾಕಿರಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸ್ಯಾನಿಟರ್ ಪ್ಯಾಡ್ ಬದಲು ಮುಟ್ಟಿನ ಕಪ್ ನೀಡಲಾಗುತ್ತಿದೆ. ಇದರಿಂದ ಪರಿಸರ ಸಂರಕ್ಷಣೆಯೂ ಆಗುತ್ತದೆ. ಕಡಿಮೆ ಬೆಲೆಯಲ್ಲಿ ಇದನ್ನು ನೀಡಲಾಗುತ್ತದೆ. ಒಂದು ಕಪ್ 5ರಿಂದ 6 ವರ್ಷ ಉಪಯೋಗ ಮಾಡಬಹುದು. ಈಗಾಗಲೇ ಈ ಕುರಿತು ಪ್ರಯೋಗಾತ್ಮಕವಾಗಿ ಪರೀಕ್ಷೆ ಮಾಡಲಾಗಿದೆ. ಇದು ಬಹಳಷ್ಟು ಸುರಕ್ಷಿತವಾಗಿದೆ. ಆದ್ದರಿಂದ ಹೆಚ್ಚಿನ ರೀತಿಯಲ್ಲಿ ಕಪ್ ಬಳಕೆ ಮಾಡಬೇಕು ಎಂದು ಕರೆ ನೀಡಿದರು.

ಮುಟ್ಟು ಆಗುವ ಸ್ತ್ರೀಯರಿಗೆ ಪ್ರೇರಣಾ ಕಾರ್ಯಕ್ರಮದಲ್ಲಿ ಮುಟ್ಟಿನ ಕಪ್ ವಿತರಣೆಗೆ ಕ್ರಮ ಕೈಗೊಳ್ಳಲು ನಿರ್ಧರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಭಿನಂದಿಸುತ್ತೇನೆ ಎಂದ ದಿನೇಶ ಗುಂಡೂರಾವ್, ಮುಟ್ಟಿನ ವಿಚಾರದಲ್ಲಿ ಮಡಿವಂತಿಕೆ ಇದೆ. ಆ ಮನಸ್ಥಿತಿ ಈಗ ಬದಲಾಗಬೇಕಿದೆ. ಅ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

1.12 ಕೋಟಿ ಕಣ್ಣುಪರೀಕ್ಷೆ

Advertisement

ಕಲಬುರಗಿ ಸೇರಿದಂತೆ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಆಶಾಕಿರಣ ಕಾರ್ಯಕ್ರಮದ ಅಡಿಯಲ್ಲಿ ಒಟ್ಟು 1.12 ಕೋಟಿ ಜನರ ಕಣ್ಣು ಮಾಡುವ ಗುರಿಹೊಂದಿ ಹಾಗೇ ಪರೀಕ್ಷೆ ಮಾಡಿದವರಿಗೆ ಈಗಾಗಲೇ 3.32 ಲಕ್ಷ ಕನ್ನಡಕ ವಿತರಣೆ ಮಾಡಲಾಗಿದೆ. ಈಗಾಗಲೇ 21 ಲಕ್ಷ ಜನರಿಗೆ ಸ್ತ್ರೀನಿಂಗ್ ಮಾಡಲಾಗಿದೆ. ಅವರಲ್ಲಿ 75,200 ಜನರಿಗೆ ಸರ್ಜರಿ ಮಾಡಲಾಗಿದೆ. ಇದಕ್ಕಾಗಿ ರೂ 61 ಕೋಟಿ ವ್ಯಯಿಸಲಾಗುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ಯಾದಗಿರಿ ಸೇರಿದಂತೆ ಮತ್ತೆ ಎಂಟು ಜಿಲ್ಲೆಗಳಿಗೆ ಈ ಕಾರ್ಯಕ್ರಮ ವಿಸ್ತರಿಸುವ ಆಲೋಚನೆ ಇದೆ. ಒಟ್ಟಾರೆ ರಾಜ್ಯದ ಪ್ರತಿಯೊಬ್ಬರು ಕಣ್ಣುಗಳ ರಕ್ಷಣೆಗೆ ಬೇಕಾಗುವ ತಪಾಸಣೆ ಹಾಗೂ ಸರ್ಜರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಹೆದ್ದಾರಿ ಹಾಟ್‌ಸ್ಪಾಟ್ ಗುರುತು

ರಾಜ್ಯ ಹೆದ್ದಾರಿಗಳಲ್ಲಿ ಅಪಘಾತ ನಡೆಯುವಂತ ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ. ಅಪಘಾತ ನಡೆದ ಸಂದರ್ಭದಲ್ಲಿ ಗಾಯಾಳುಗಳನ್ನು ತಕ್ಷಣ ಸಮೀಪ ಆರೋಗ್ಯ ಕೇಂದ್ರಕ್ಕೆ ರವಾನಿಸಲು 65 ಅಂಬುಲೆನ್ಸ್‌ ಗಳನ್ನು ಬಳಕೆ ಮಾಡಲಾಗುತ್ತಿದೆ. ಅಗತ್ಯ ಹಾಗೂ ತುರ್ತು ಚಿಕಿತ್ಸೆ ನೀಡಲು ಅನುಕೂಲವಾಗುವಂತ ತರಬೇತಿ ನೀಡಲು ಹಾಗೂ ಅಗತ್ಯ ವೈದ್ಯಕೀಯ ವೆಚ್ಚಕ್ಕಾಗಿ ರೂ 65 ಕೋಟಿ ಅನುದಾ ಬಿಡುಗಡೆ ಮಾಡಲಾಗಿದೆ ಎಂದರು.

ಕಾರ್ಯಕ್ರಮ ಸಂಯೋಜಕಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮಾತನಾಡಿ, ಮುಟ್ಟಿನ ವಿಚಾರದಲ್ಲಿ ಸರ್ಕಾರ ಒಂದು ದಿಟ್ಟ ಹೆಜ್ಜೆ ಇಟ್ಟು ಪ್ರೇರಣಾ ಕಾರ್ಯಕ್ರಮದಡಿಯಲ್ಲಿ ನೈರ್ಮಲ್ಯ ತಡೆಗಟ್ಟಿ ಸುಸ್ಥಿರವಾದ ಕ್ರಮ ಕೈಗೊಳ್ಳಲು ಮುಟ್ಟಿನ ಕಪ್ ವಿತರಣೆಗೆ ಮುಂದಾಗಿದೆ. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ. ಮುಟ್ಟಿನ ಘನ ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮ ತೆಗೆದುಕೊಳ್ಳಲು ಈ ಕಾರ್ಯಕ್ರಮದ ಅಡಿಯಲ್ಲಿ ಕ್ರಮ ವಹಿಸಲಾಗುತ್ತಿದೆ. ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವತಿಯಿಂದ ರೂ 1.57 ಕೋಟಿ ಹಾಗೂ ಕೆಕೆಆರ್ ಡಿಬಿ ವತಿಯಿಂದ ರೂ 2.01 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ ಜಿಲ್ಲೆಯಲ್ಲಿ 1.03 ಲಕ್ಷ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಣೆಗೆ ಕ್ರಮ ವಹಿಸಲಾಗುತ್ತಿದೆ ಎಂದರು.

ಕಾರ್ಯಕ್ರಮ ದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಡಾ.ಅಜಯಸಿಂಗ್, ಶಾಸಕರಾದ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಡಿಸಿ.ಜಿಂ‌ಸಿಇಒ ಇತರೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next