Advertisement

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

11:36 PM May 19, 2024 | Team Udayavani |

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರಕಾರ ಕ್ರಾಂತಿಕಾರಿ ಹೆಜ್ಜೆಗಳಿಂದ ಒಂದು ವರ್ಷದಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಮುಂದಿನ ನಾಲ್ಕು ವರ್ಷಗಳನ್ನು ಸಮರ್ಥವಾಗಿ ಎದುರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿ ಸಿರುವ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ “ಸರ್ವರಿಗೂ ಸಮಬಾಳು-ಸಮಪಾಲು’ ತತ್ವದಡಿ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಸೃಷ್ಟಿಸಲಿದೆ ಎಂದು ಹೇಳಿದ್ದಾರೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಸೋಮವಾರ (ಮೇ 20) ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಪತ್ರಿಕಾ ಪ್ರಕಟನೆ ನೀಡಿರುವ ಸುಜೇìವಾಲ, ಅನ್ನಭಾಗ್ಯ, ಬರ ಪರಿಹಾರ ಬಿಡುಗಡೆಯಂತಹ ಹಲವು ವಿಷಯಗಳಲ್ಲಿ ಕೇಂದ್ರ ಸರಕಾರದ ಅಸಹಕಾರದ ಮಧ್ಯೆಯೂ ರಾಜ್ಯ ಸರಕಾರ, ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆ ಗಳನ್ನು 9 ತಿಂಗಳುಗಳಲ್ಲಿ ಜಾರಿಗೊಳಿಸುವ ಮೂಲಕ ನುಡಿ ದಂತೆ ನಡೆಯುತ್ತಿದೆ. ಸರ್ವತೋಮುಖ ಅಭಿವೃದ್ಧಿಯ ವಿಭಿನ್ನ ಆಶಯದೊಂದಿಗೆ ವಿಶ್ವದಲ್ಲೇ ಮಾದರಿಯಾಗಿದೆ ಎಂದು ಬಣ್ಣಿಸಿದ್ದಾರೆ.

ಸರಕಾರ ಎಂದರೆ ಕೇವಲ ರಸ್ತೆ, ಸೇತುವೆಯಂತಹ ಮೂಲ ಸೌಕರ್ಯಗಳನ್ನು ಕಲ್ಪಿಸುವುದಲ್ಲ; ಬಡವರು, ಮಹಿಳೆಯರು, ರೈತರು ಸಹಿತ ಶ್ರಮಿಕ ವರ್ಗವನ್ನೂ ಆರ್ಥಿಕವಾಗಿ ಸಶಕ್ತರನ್ನಾಗಿಸಿ, ಮುಖ್ಯವಾಹಿನಿಗೆ ತಂದು, ಸರ್ವರ ಸರ್ವತೋಮುಖ ಅಭಿವೃದ್ಧಿ ಮಾಡುವುದು ಎಂಬ ವಿಭಿನ್ನ ಆಶಯದೊಂದಿಗೆ ಸರಕಾರ ಮುಂದಡಿ ಇಟ್ಟಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ವಿಶ್ವದಲ್ಲೇ ಮಾದರಿಯಾಗಿದೆ. ಅಲ್ಪಾವಧಿಯಲ್ಲಿ ಸರಕಾರ ಅಪೂರ್ವ ಸಾಧನೆ ಮಾಡಿ, ಅಗಣಿತ ಜನಮನ್ನಣೆ ಗಳಿಸಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ 4.60 ಕೋಟಿ ಜನರನ್ನು ತಲುಪುತ್ತಿವೆ ಎಂದಿದ್ದಾರೆ.

ರಾಜ್ಯದ 223 ತಾಲೂಕುಗಳಲ್ಲಿ ಭೀಕರ ಬರ ಪರಿಸ್ಥಿತಿ ಇದೆ. ಕೇಂದ್ರ ಸರಕಾರ ಬರ ಪರಿಹಾರ ನೀಡಲು ವಿಳಂಬ ಮಾಡಿ, ಅಸಹಕಾರ ತೋರಿದಾಗಲೂ ರಾಜ್ಯದ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾದವು. ಜನ ತೊಂದರೆ ಇಲ್ಲದೆ ಜೀವನ ಸಾಗಿಸಲು ರಾಜ್ಯ ಸರಕಾರ ತನ್ನ ಯೋಜನೆಗಳ ಮೂಲಕ ಅನುವು ಮಾಡಿಕೊಟ್ಟಿತು. ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹಣ ನೀಡಿದ ಸರಕಾರದ ನಡೆ ಶ್ಲಾಘನೀಯ. ಈ ವೇಳೆ ರೈತರ ಖಾತೆಗೆ 2 ಸಾ. ರೂಪಾಯಿಗಳನ್ನು ಕೂಡ ರಾಜ್ಯ ಸರಕಾರ ಜಮೆ ಮಾಡಿ ರೈತ ಪರ ಸರಕಾರ ಎಂಬುದನ್ನು ಸಾಬೀತುಮಾಡಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next