Advertisement

ಮೈಸೂರು: ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ

09:04 PM Nov 26, 2021 | Team Udayavani |

ಮೈಸೂರು: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕ ಮತ್ತು ಮಹಿಳೆಯನ್ನ ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಲಾಗಿದೆ.

Advertisement

ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮಸ್ಥರಿಂದ ಯುವಕ ಮತ್ತು ಯುವತಿ ಮೇಲೆ ಹಲ್ಲೆ ನಡೆಸಲಾಗಿದೆ .

ಅನೈತಿಕ ಸಂಬಂಧ ಶಂಕೆ ಆರೋಪದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯಿಂದ ಇಬ್ಬರನ್ನು  ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಮಹಿಳೆ ವಿವಾಹಿತೆ ಎಂದು ತಿಳಿದು ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

ಮಹಿಳೆ ಮತ್ತು ಯುವಕನನ್ನು ನಂಜನಗೂಡು ಠಾಣೆಯ ಪೋಲಿಸರು ರಕ್ಷಿಸಿದ್ದಾರೆ. ನಂಜನಗೂಡು ಇನ್ಸ್‌ಪೆಕ್ಟರ್ ಲಕ್ಷ್ಮಿಕಾಂತ ತಳವಾರ್ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿ ಸಂತ್ರಸ್ತರನ್ನು ರಕ್ಷಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next