ಉಪ್ಪಿನಂಗಡಿ: ಆತ್ಮಹತ್ಯೆ ಮಾಡಿ ಕೊಳ್ಳುವುದಾಗಿ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್ ಹಾಕಿ ಯುವಕನೋರ್ವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 30ರ ಮಧ್ಯರಾತ್ರಿ ನೆಲ್ಯಾಡಿ ಸಮೀಪದ ಇಚಿಲಂಪಾಡಿ ಎಂಬಲ್ಲಿ ನಡೆದಿದೆ.
ಇಂಚಿಲಂಪಾಡಿಯ ರೆನೀಶ್ (27) ಮೃತ ಯುವಕ. ಈತನ ತಂದೆ, ತಾಯಿ ಕೆಲವು ವರ್ಷಗಳ ಹಿಂದೆ ನಿಧನ ಹೊಂದಿದ್ದು, ತಮ್ಮ 3 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮನೆಯಲ್ಲಿ ಒಬ್ಬಂಟಿಯಾಗಿದ್ದ ರೆನೀಶ್ ವಿದ್ಯುತ್ ಲೈನ್‌ನ ಕೆಲಸಕ್ಕೆ ಹೋಗುತ್ತಿದ್ದ. ಮಾ. 30ರಂದು ಕೆಲಸಕ್ಕೆ ಹೋಗಿ ಬಂದಿರುವ ಈತ ಸ್ಟೇಟಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.