Advertisement

Mavinakatte: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

09:02 PM Aug 20, 2024 | Team Udayavani |

ಪುಂಜಾಲಕಟ್ಟೆ: ಬಾವಿಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ಸಂಭವಿಸಿದೆ.

Advertisement

ಇಲ್ಲಿನ ನಿವಾಸಿ ಸಾಯಿ ಶಾಂತಿ (ಯಶೋದರ) ಅವರ ಪುತ್ರ ಸುಮಂತ್‌ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಆತ ಮುಂಜಾನೆ 5 ಗಂಟೆಯ ಹೊತ್ತಿಗೆ ಎದ್ದು ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸುಮಂತ್‌ ಉಜಿರೆ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದು, ಕಾಲೇಜಿನಲ್ಲಿ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದ. ಆತನ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next