ಬೆಂಗಳೂರು: ಅಸ್ಸಾಂನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಯುವಕನನ್ನು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಶೇಹರಿ ಚೌಧರಿ(20) ಬಂಧಿತ. ಮಾ.17ರಂದು ನಸುಕಿನ 1.45ರ ಸುಮಾರಿಗೆ ಅಸ್ಸಾಂನಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದ ಇಂಡಿಯಾ ವಿಮಾನದಲ್ಲಿ ಆರೋಪಿ ಶೇಹರಿ ಚೌಧರಿ ಪ್ರಯಾಣಿಸುತ್ತಿದ್ದ. ಈತ ಶೌಚಾಲಯಕ್ಕೆ ಹೋಗಿ ಬಂದಿದ್ದು, ಶೌಚಾಲಯದಿಂದ ಹೊಗೆ ಮತ್ತು ವಾಸನೆ ಬರುತ್ತಿತ್ತು. ಅನುಮಾನಗೊಂಡ ಸಿಬ್ಬಂದಿ ಪರಿಶೀಲಿಸಿದಾಗ ಶೌಚಾಲ ಯದಲ್ಲಿ ಸಿಗರೇಟ್ ವಾಸನೆ ಬಂದಿದ್ದು, ಕೂಡಲೇ ವಿಮಾನದ ಕ್ಯಾಪ್ಟನ್‌ಗೆ ಮಾಹಿತಿ ನೀಡಿದ್ದಾರೆ.
ಬಳಿಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ವಿಮಾನದ ಕ್ಯಾಪ್ಟನ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.