Advertisement

ಹೇಮಾವತಿಯಲ್ಲಿ ಕೊಚ್ಚಿ ಹೋದ ಯುವಕ

10:53 PM Aug 07, 2019 | Team Udayavani |

ಚಿಕ್ಕಮಗಳೂರು: ಅಬ್ಬರದ ಮಳೆಗೆ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಪ್ರವಾಹಕ್ಕೆ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದೆ. ನರಸಿಂಹರಾಜಪುರ ತಾಲೂಕಿನ ಮಾಳೂರುದಿಣ್ಣೆ ಎಂಬಲ್ಲಿ ಗಾಳಿಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಕುಮಾರ್‌ ಮೃತಪಟ್ಟಿದ್ದಾರೆ. ಇನ್ನೊಂದೆಡೆ, ಮೂಡಿಗೆರೆ ತಾಲೂಕಿನ ಆಲೂರು ಗ್ರಾಮದ ಶ್ರೀವತ್ಸ ಎಂಬ ಯುವಕ ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ.

Advertisement

ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ 2 ದಿನಗಳ ಕಾಲ ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮೂಡಿಗೆರೆ ತಾಲೂಕಿನ ಹಂತೂರು ಗ್ರಾಮದಲ್ಲಿ ನೆರೆಗೆ ಸಿಲುಕಿದ್ದ 9 ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಳಸದಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮೇಲೆ ಭದ್ರಾ ನದಿಯ ನೀರು ಹರಿಯುತ್ತಿದೆ.

ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮತ್ತೂಂದು ರಸ್ತೆ ಹಳುವಳ್ಳಿಯಲ್ಲೂ ಭೂಕುಸಿತವುಂಟಾಗಿದೆ. ಶೃಂಗೇರಿ ಶಾರದಾ ಪೀಠದ ಕಪ್ಪೆ ಶಂಕರ ದೇಗುಲ, ಸಂದ್ಯಾವಂದನ ಮಂಟಪ ನೀರಿನಲ್ಲಿ ಮುಳುಗಿದ್ದರೆ, ಮಠದಿಂದ ನರಸಿಂಹವನಕ್ಕೆ ತೆರಳುವ ಮಾರ್ಗದಲ್ಲಿ ಪ್ರವಾಹದಿಂದ ನೀರು ತುಂಬಿದೆ. ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ನರಸಿಂಹರಾಜಪುರ ಹಾಗೂ ಕೊಪ್ಪ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next