Advertisement

Mangaluru ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆ

11:47 PM Aug 15, 2023 | Team Udayavani |

ಮಂಗಳೂರು: ಮಂಗಳೂರಿಗೆ ಉದ್ಯೋಗಕ್ಕೆಂದು ಬಂದಿದ್ದ ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Advertisement

ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದ ಸೋನಿಯಾ ಬೆಂದೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ನಾಪತ್ತೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next