Advertisement
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ರಾಜ್ಯದ ಎಲ್ಲ ಜಿ. ಪಂ.ನ 22 ಗ್ರಾ. ಪಂ.ಗಳಲ್ಲಿ ಆಧಾರ್ ನೋಂದಣಿ ಕೇಂದ್ರ ಸ್ಥಾಪಿಸಲು ಸರಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಯ ಒಟ್ಟು 44 ಗ್ರಾ. ಪಂ.ಗಳಲ್ಲಿ ನೋಂದಣಿ ಕೇಂದ್ರ ಆರಂಭವಾಗಲಿದೆ. ಕರಾವಳಿಯ ಯಾವೆಲ್ಲ ಪಂಚಾಯತ್ ಎಂಬುದು ಶೀಘ್ರ ಅಂತಿಮಗೊಳ್ಳಲಿದೆ.
Related Articles
Advertisement
ಕೊರೊನಾ ಲಸಿಕೆ; ಆಧಾರ್ ತಿದ್ದುಪಡಿ! : ಸಾರ್ವಜನಿಕರು ಕೋವಿಡ್ 19 ಲಸಿಕೆಯನ್ನು ಆಧಾರ್ ದೃಢೀಕರಣದೊಂದಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ನಿವಾಸಿಗಳು ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ಅಪ್‌ಡೇಟ್ ಮಾಡಲು ಹೆಚ್ಚು ಬೇಡಿಕೆ ಇಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಧಾರ್ ತಿದ್ದುಪಡಿಗೆ ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮೂಲಗಳು ತಿಳಿಸಿವೆ.
ಯಾವುದೆಲ್ಲ ತಿದ್ದುಪಡಿ?:
ಮೊಬೈಲ್ ನಂಬರ್ ಅಪ್‌ಡೇಟ್, ಇ ಮೇಲ್ ಐಡಿ ದಾಖಲಾತಿಗೆ ಅವಕಾಶವಿದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್ ನೋಂದಣಿ ಸಹ ಮಾಡಬಹುದು. ಇದರ ಜತೆೆ ಹೆಸರು, ವಿಳಾಸ, ಜನ್ಮದಿನಾಂಕ ಬದಲಾವಣೆ ಸೇರಿದಂತೆ ಆಧಾರ್‌ನಲ್ಲಿ ಇತರ ತಿದ್ದುಪಡಿ ಮಾಡಲು ಕೂಡ ಅವಕಾಶ ದೊರೆಯುವ ಸಾಧ್ಯತೆಯಿದೆ.
“ಗ್ರಾ.ಪಂ. ಆಯ್ಕೆಗೆ ಕ್ರಮ’:
ಜಿಲ್ಲೆಯ 22 ಗ್ರಾ.ಪಂ.ಗಳಲ್ಲಿ ಆಧಾರ್ ನೋಂದಣಿ ಕೇಂದ್ರ ಸ್ಥಾಪನೆಗೆ ಆವಶ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಗ್ರಾ.ಪಂ. ಆಯ್ಕೆ ಕೆಲವೇ ದಿನಗಳಲ್ಲಿ ನಡೆಸಿ, ಅಲ್ಲಿನ ಸಿಬಂದಿಗೆ ತರಬೇತಿ ನೀಡಿ ತಿಂಗಳಾಂತ್ಯಕ್ಕೆ ಕೇಂದ್ರ ಕಾರ್ಯನಿರ್ವಹಿಸುವಂತೆ ಮಾಡಲಾಗುವುದು. ಆ ಬಳಿಕ ಎಲ್ಲ ಗ್ರಾ.ಪಂ.ಗಳಲ್ಲಿಯೂ ಕೇಂದ್ರ ಸ್ಥಾಪನೆಗೆ ಸರಕಾರ ಆದ್ಯತೆ ನೀಡಲಿದೆ.– ಡಾ| ಕುಮಾರ್, ಸಿಇಒ, ಜಿ. ಪಂ. -ದ.ಕ.