Advertisement

ಉಡುಪಿ: ಆಧಾರ್‌ ಕಾರ್ಡ್‌ ನವೀಕರಣಕ್ಕೆ ಸೂಚನೆ

11:35 PM Jan 19, 2023 | Team Udayavani |

ಉಡುಪಿ: ಜಿಲ್ಲೆಯಲ್ಲಿ 10 ವರ್ಷಗಳ ಹಿಂದೆ ಆಧಾರ್‌ ಕಾರ್ಡ್‌ ನೋಂದಣಿ ಮಾಡಿಸಿಕೊಂಡ ಪ್ರತಿಯೊಬ್ಬರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್‌ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ತಿಳಿಸಿದರು.

Advertisement

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಧಾರ್‌ ನವೀಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಜಿಲ್ಲೆಯಲ್ಲಿ 5 ವರ್ಷದೊಳಗಿನ 42,312 ಮಕ್ಕಳು ಆಧಾರ್‌ ನೋಂದಣಿ ಮಾಡಿಸಿಕೊಂಡಿದ್ದು, ಕೈ ಬೆರಳಚ್ಚು ಮತ್ತು ಕಣ್ಣಿನ ಸ್ಕ್ಯಾನ್‌, ಬಯೋಮೆಟ್ರಿಕ್‌ ನೀಡದೇ ಇರುವ ಮಕ್ಕಳು ಬಯೋಮೆಟ್ರಿಕ್‌ ನೀಡಬೇಕು ಎಂದರು.

2 ಲಕ್ಷ ಆಧಾರ್‌ಗೆ ಫೋನ್‌ ನಂಬರ್‌ ಲಿಂಕ್‌ ಆಗಿಲ್ಲ
ಜಿಲ್ಲೆಯಲ್ಲಿ 13 ಲಕ್ಷಕ್ಕೂ ಅಧಿಕ ಜನರು ಆಧಾರ್‌ ನೋಂದಣಿ ಮಾಡಿಸಿಕೊಂಡಿದ್ದು, ಇದರಲ್ಲಿ 15 ವರ್ಷ ಮೇಲ್ಪಟ್ಟ 2 ಲಕ್ಷ ಮಂದಿ ತಮ್ಮ ಮೊಬೈಲ್‌ ಸಂಖ್ಯೆ ಜೋಡಣೆ ಮಾಡಿಲ್ಲ.

ಅಂಥವರು ಮೊಬೈಲ್‌ ಸಂಖ್ಯೆಯನ್ನು ಆಧಾರ್‌ ಜತೆ ಜೋಡಣೆ ಮಾಡಿಕೊಳ್ಳಬೇಕು. ಸರಕಾರದ ಸೌಲಭ್ಯ ಪಡೆಯಲು ಆಧಾರ್‌ ಸಂಖ್ಯೆ ಮುಖ್ಯವಾಗಿದೆ. ಆಧಾರ್‌ ಸಂಖ್ಯೆಯು ಬ್ಯಾಂಕ್‌ ಖಾತೆ ಜೋಡಣೆ ಹೊಂದಿ, ಸರಕಾರದ ವಿವಿಧ ಯೋಜನೆಗಳ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ವರ್ಗಾಯಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಎಸ್ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌., ತರಬೇತಿ ನಿರತ ಐಎಎಸ್‌ ಅಧಿಕಾರಿ ಯತೀಶ್‌, ಆಧಾರ್‌ ಪ್ರಾಧಿಕಾರದ ಉಪ ನಿರ್ದೇಶಕ ರಾಘವೇಂದ್ರ ಎಸ್‌. ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next