Advertisement
ಈ ಕುರಿತು ಬುಧವಾರ ಹಮ್ಮಿಕೊಂಡಿದ್ದ ಸಭೆ ಹಾಗೂ ವೀಡಿಯೋ ಸಂವಾದದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸಹಕಾರಿ ಸಂಘಗಳ ಸೊಸೈಟಿಗಳ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಗೆ ಬರುವ ಸದಸ್ಯರಿಗೆ, ಅಬಕಾರಿ ಉಪ ಆಯುಕ್ತರು ತಮ್ಮ ಅಧೀನದಲ್ಲಿರುವ ವೈನ್‌ಶಾಪ್‌ಗ್ಳ ಮಾಲಕರು, ಸಿಬಂದಿಗೆ, ಸಾರಿಗೆ ಇಲಾಖೆ ಅಧಿಕಾರಿಗಳು ಬಸ್ ಮಾಲಕರು, ಚಾಲಕರು, ನಿರ್ವಾಹಕರು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಎಲ್ಲ ಸರಕಾರಿ, ಖಾಸಗಿ, ಸ್ವಾಯತ್ತ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿಶೇಷ ಅಭಿಯಾನ ಹಮ್ಮಿಕೊಂಡು ಎಪಿಕ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡುವ ಕಾರ್ಯಕ್ಕೆ ವೇಗ ನೀಡುವಂತೆ ಸೂಚಿಸಿದರು. ಅದೇ ರೀತಿ ವಿವಿಧ ಇಲಾಖೆಗಳು, ನಿಗಮಗಳು, ಸಿಬಂದಿಗೆ ಎಪಿಕ್ ಕಾರ್ಡ್‌ಗೆ ಆಧಾರ್ ಜೋಡಣೆ ಮಾಡುವ ಕಾರ್ಯ ದಲ್ಲಿ ಕೂಡಲೇ ತೊಡಗಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತರಾದ ಮದನ್ ಮೋಹನ್, ಗಿರೀಶ್ ನಂದನ್ ಇದ್ದರು. ಆ. 21ಕ್ಕೆ ಮಿಂಚಿನ ನೋಂದಣಿ
ಆ. 21ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ವರೆಗೆ ಎಲ್ಲ ಬಿಎಲ್‌ಒಗಳು ಮತಗಟ್ಟೆಯಲ್ಲಿ ಹಾಜರಿದ್ದು, ಮತಗಟ್ಟೆ ಅಧಿಕಾರಿಗಳು, ಮೆಲ್ವಿಚಾರಕರು, ಮತಗಟ್ಟೆ ಏಜೆಂಟರೊಂದಿಗೆ 6ಬಿ ಸಂಬಂಧಿಸಿದಂತೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ಎಪಿಕ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡುವ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಂಡು ಮತದಾರರನ್ನು ನೋಂದಾಯಿಸುವಂತೆ ದ.ಕ. ಜಿ.ಪಂ. ಸಿಇಒ ಡಾ| ಕುಮಾರ್ ಅಧಿಕಾರಿಗಳಿಗೆ ತಿಳಿಸಿದರು.
Related Articles
Advertisement
ಪಕ್ಷ ಪ್ರತಿನಿಧಿಗಳಿಗೆ ಸಲಹೆಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಜೋಡಿಸುವ ಪ್ರಕ್ರಿಯೆಯಲ್ಲಿ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ದೃಢೀಕರಿಸಲು ಸ್ವಯಂ ಪ್ರೇರಿತರಾಗಿ ವೋಟರ್ ಹೆಲ್ಪ್ಲೈನ್ ಆ್ಯಪ್ ಮೂಲಕ ಆನ್‌ಲೈನ್ ಮೂಲಕ ಆಧಾರ್ ಸಂಖ್ಯೆಯನ್ನು ಜೋಡಿಸುವಂತೆ ಕೇಂದ್ರ ಸರಕಾರವು ಆದೇಶಿಸಿದೆ ಎಂದರು. ಎಲ್ಲ ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೆ ಬಿಎಲ್‌ಎಗಳನ್ನು ನೇಮಕ ಮಾಡಬೇಕು, ಬಿಎಲ್‌ಎಗಳು ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು. ಒಂದು ವೇಳೆ ಪಟ್ಟಿಯಲ್ಲಿರುವ ಮತದಾರರು ಮೃತರಾಗಿದ್ದರೆ ಅಥವಾ ವಲಸೆ ಹೋಗಿದ್ದರೆ, ಅಂಥವರ ಮಾಹಿತಿಯನ್ನು ಬಿಎಲ್‌ಒಗಳಿಗೆ ನೀಡಬೇಕು, 18 ವಷì ಮೇಲ್ಪಟ್ಟ ಅರ್ಹ ಮತದಾರರು ಮತದಾರರ ಪಟ್ಟಿಗೆ ಸೇಪರ್ಡೆಯಾಗಿರುವ ಬಗ್ಗೆ ಪರಿಶೀಲಿಸಬೇಕು. ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಸದ್ಯಸರ ಹೆಸರು ಒಂದೇ ಕಡೆ ಬರುವಂತೆ ನೋಡಿಕೊಳ್ಳಬೇಕು. ಎಲ್ಲ ಬಿಎಲ್‌ಎಗಳು ತಮ್ಮ ವ್ಯಾಪ್ತಿಯ ಅರ್ಹ ಅಂಗವಿಕಲರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಬಗ್ಗೆ ಪರಿಶೀಲಿಸಬೇಕು. ಎಲ್ಲ ಮತದಾರರಿಗೆ ಎಪಿಕ್ ಕಾರ್ಡ್ ನೀಡಿರುವ ಬಗ್ಗೆ ಖಚಿತ ಪಡಿಸಿ ಕೊಳ್ಳಬೇಕು. ತೃತೀಯಲಿಂಗಿ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿರುವ ಬಗ್ಗೆ ಪರಿಶೀಲಿಸಿ ಕೊಳ್ಳಬೇಕು ಎಂದು ಹೇಳಿದರು.