Advertisement

ಮಯೂರಿ ಹುಟ್ಟುಹಬ್ಬಕ್ಕೆ “ಆದ್ಯಂತ’ಪೋಸ್ಟರ್‌ ರಿಲೀಸ್

09:12 AM Jul 10, 2020 | Lakshmi GovindaRaj |

ಇತ್ತೀಚೆಗಷ್ಟೆ ಬಹುಕಾಲದ ಗೆಳೆಯ ಅರುಣ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಮಯೂರಿ ಕ್ಯಾತರಿ, ಈಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಹೌದು! ಮಯೂರಿ “ಆದ್ಯಂತ’ ಎಂಬ ಮಹಿಳಾ ಪ್ರಧಾನ ಚಿತ್ರದಲ್ಲಿ ನಟಿಸಿದ್ದು, ಅದರ ಚಿತ್ರೀಕರಣ ಪೂರ್ಣಗೊಂಡಿದೆ. ಅಲ್ಲದೇ  ಈ ಚಿತ್ರದ ಮೋಷನ್ ಪೋಸ್ಟರ್ ಅವರ ಹುಟ್ಟುಹಬ್ಬದಂದೇ ಬಿಡುಗಡೆಯಾಗುತ್ತಿದ್ದು, ಸ್ವತಃ ಮಯೂರಿ ಅವರೇ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

Advertisement

ಮಯೂರಿ ಹುಟ್ಟುಹಬ್ಬ ಜುಲೈ 12ರಂದು ಚಿತ್ರದ ಮೋಷನ್ ಪೋಸ್ಟರ್ ರಿಲೀಸ್‌ ಆಗುತ್ತಿದ್ದು, ರಮೇಶ್​ ಬಾಬು ನಿರ್ಮಾಣ ಚಿತ್ರಕ್ಕಿದೆ. ಕ್ರೈಂ ಥ್ರಿಲ್ಲರ್ ಕಥಾ ಹಂದರವಿರುವ ಈ ಚಿತ್ರದಲ್ಲಿ ಮಯೂರಿ ರಾ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್​ ಶರ್ಮನ್ ಚಿತ್ರವನ್ನು ನಿರ್ದೇಶಿಸಿದ್ದು,  ಇನ್ನು ಎರಡು ದಿನಗಳಲ್ಲಿ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್ ಬಿಡುಗಡೆಯಾಗಲಿದೆ.

ಇನ್ನು ಕಿಟ್ಟು ಸಂಕಲನ, ಕೃಷ್ಣಪ್ರಸಾದ್‌ ಸಂಭಾಷಣೆ, ಸ್ಯಾಂಡಿ ಸಂಗೀತ ಸಂಯೋಜನೆ ಸೇರಿದಂತೆ ಡಾ. ವಿ.ನಾಗೇಂದ್ರ ಪ್ರಸಾದ್‌ ಸಾಹಿತ್ಯ ಚಿತ್ರಕ್ಕಿದೆ. ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ಮಯೂರಿ “ಕೃಷ್ಣಲೀಲಾ’ ಸಿನಿಮಾದ ಮೂಲಕ ನಾಯಕಿಯಾಗಿ ಪರಿಚಯವಾಗಿ, ಅನಂತರ ಹಲವಾರು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next