ನವಿಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಆಶ್ರಯದಲ್ಲಿ ಶ್ರೀ ಮಹಾಗಣಪತಿ ಮಕ್ಕಳ ಮತ್ತು ಮಹಿಳಾ ಯಕ್ಷಗಾನ ಮಂಡಳಿ ಕಾಟಿಪಳ್ಳ, ಸುರತ್ಕಲ್ ಇದರ ವರ್ಷದ ಮುಂಬಯಿ ಪ್ರವಾಸದ ಸರಣಿ ಯಕ್ಷಗಾನ ಪ್ರದರ್ಶನದ ಸಮಾರೋಪ ಸಮಾರಂಭವು ಆ. 1 ರಂದು ಅಪರಾಹ್ನ ಘನ್ಸೋಲಿಯ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ನಡೆಯಿತು.
ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕಲಾ ಪೋಷಕರಾದ ಆನಂದ ಬಂಗೇರ ಬಜ್ಪೆ, ಮೇಳದ ಪ್ರಬುದ್ಧ ಕಲಾವಿದೆಯರುಗಳಾದ ಮಾಲತಿ ವೆಂಕಟೇಶ್ ಮತ್ತು ಸಾಯಿ ಸುಮಾ ಅವರನ್ನು ಅಜೆಕಾರು ಕಲಾಭಿಮಾನಿ ಬಳಗದ ವತಿಯಿಂದ ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರದೊಂದಿಗೆ ಸಮ್ಮಾನಿಸಿ ಗೌರವಿಸಲಾಯಿತು.
ಶ್ರೀ ಮೂಕಾಂಬಿಕಾ ಮಂದಿರದ ವತಿಯಿಂದ ಯಕ್ಷಗಾನ ಮಂಡಳಿಯ ನಿರ್ದೇಶಕಿ ಪೂರ್ಣಿಮಾ ಯತೀಶ್ ರೈ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು. ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರನ್ನು ಮಂಡಳಿಯ ಕಲಾವಿದರು ಗೌರವಿಸಿದರು.
ಮುಖ್ಯ ಅತಿಥಿಯಾಗಿ ಉದ್ಯಮಿ ಸದಾಶಿವ ಶೆಟ್ಟಿ, ನವಿಮುಂಬಯಿ ಹೊಟೇಲ್ ಓನರ್ ಅಸೋಸಿಯೇಶನ್ ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಉದ್ಯಮಿ ಕರುಣಾಕರ ಶೆಟ್ಟಿ ನಿಟ್ಟೆ, ಸಿಬಿಡಿ ಹೊಟೇಲ್ ಉದ್ಯಮಿ ಸಂಜೀವ ಎನ್. ಶೆಟ್ಟಿ, ಉದ್ಯಮಿ ಕಾಪು ಬೈರುಗುತ್ತಿನ ಗುತ್ತಿನಾರ್ ರಮೇಶ್ ಎಸ್. ಶೆಟ್ಟಿ, ಉದ್ಯಮಿ ಚಂದ್ರಶೇಖರ್ ಎಸ್. ಶೆಟ್ಟಿ, ಹೆಗ್ಗಡೆ ಸೇವಾ ಸಂಘ ಮುಂಬಯಿ ಅಧ್ಯಕ್ಷ ವಿಜಯ ಬಿ. ಹೆಗ್ಡೆ, ನೆರೂಲ್ ಉದ್ಯಮಿ ರಮೇಶ್ ಶೆಟ್ಟಿ, ಅಜೆಕಾರು ಬಾಲಕೃಷ್ಣ ಶೆಟ್ಟಿ, ಮುಲುಂಡ್ ಉದ್ಯಮಿ ಸುರೇಶ್ ಶೆಟ್ಟಿ ಕಡಂದಲೆ ಅವರು ಉಪಸ್ಥಿತರಿದ್ದರು.
ಅತಿಥಿಗಳನ್ನು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ಸ್ವಾಗತಿಸಿದರು. ಬಂಟರವಾಣಿಯ ಗೌರವ ಸಂಪಾದಕ ಅಶೋಕ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶ್ರೀ ಮಹಾಗಣಪತಿ ಮಕ್ಕಳ ಮತ್ತು ಮಹಿಳಾ ಯಕ್ಷಗಾನ ಮಂಡಳಿಯ ಕಲಾವಿದರಿಂದ ಶ್ರೀ ದೇವಿ ಮಹಾತೆ¾ ಯಕ್ಷಗಾನ ಪ್ರದರ್ಶನಗೊಂಡಿತು.