Advertisement

AAP: ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಸ್ಪರ್ಧಿಸಲು ಆಮ್‌ ಆದ್ಮಿ ಪಕ್ಷ ನಿರ್ಧಾರ

09:53 PM Jun 08, 2024 | Team Udayavani |

ಬೆಂಗಳೂರು: ಮುಂಬರುವ ಎಲ್ಲ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವ ಬಗ್ಗೆ ಎಎಪಿ ತೀರ್ಮಾನಿಸಿದೆ. ಶನಿವಾರ ನಡೆದ ರಾಜ್ಯ ಕಾರ್ಯಾಕಾರಿಣಿಯಲ್ಲಿ ಪಕ್ಷದ ಮುಖಂಡರು ಈ ನಿರ್ಧಾರಕ್ಕೆ ಬಂದಿದ್ದಾರೆ.

Advertisement

ಸಭೆ ಬಳಿಕ ಮಾತನಾಡಿದ ಎಎಪಿ ಮುಖಂಡ ದಿಲೀಪ್‌ ಪಾಂಡೆ, ಕಳೆದ ಚುನಾವಣೆಯಲ್ಲಿ ಆದ ಅನುಭವಗಳಿಂದ ಪಾಠ ಕಲಿತು ಮುಂದಿನ ದಿನಗಳಲ್ಲಿ ಸರಿಯಾದ ಹೆಜ್ಜೆ ಇಡಬೇಕು ಎಂದು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ನಡೆಯಲಿರುವ ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದರು.

ದೇಶದಲ್ಲಿ ನರೇಂದ್ರ ಮೋದಿ ಯುಗ ಮುಕ್ತಾಯವಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮತ್ತೆ ಮರುಜೀವ ಬಂದಿದೆ. ದೇಶವನ್ನು ಉಳಿಸಲು ನಾವು ಮುಂದಿನ ಚುನಾವಣೆಗಳಲ್ಲಿ ಗೆಲ್ಲಬೇಕು. ಆಮ್‌ ಆದ್ಮಿ ಪಾರ್ಟಿ ಶಕ್ತಿ ಏನೆಂದು ನಮಗಿಂತ ಅಮಿತ್‌ ಶಾ ಮತ್ತು ಮೋದಿಗೆ ಚೆನ್ನಾಗಿ ಅರ್ಥವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next