Advertisement

ಚುನಾವಣಾ ಅಖಾಡಕ್ಕೆ ಆಮ್‌ ಆದ್ಮಿ ಪಕ್ಷ

06:45 AM Jan 19, 2018 | Team Udayavani |

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ  ಎಲ್ಲಾ ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ ಎಂದು ಪಕ್ಷದ ಕರ್ನಾಟಕ ಉಸ್ತುವಾರಿ ಪಂಕಜ್‌ ಗುಪ್ತಾ ಹೇಳಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲು ಇದು ಸೂಕ್ತವಾದ ಸಮಯವಾಗಿದೆ ಎಂಬುದು ಸಮೀಕ್ಷೆಯಿಂದ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಕಣಕ್ಕಿಳಿಯಲು ನಿರ್ಧರಿಸಿದೆ ಎಂದು ತಿಳಿಸಿದರು.

ಪಕ್ಷ ನಡೆಸಿರುವ ಸಮೀಕ್ಷೆಯಲ್ಲಿ ಕರ್ನಾಟದ ಜನರು ಬದಲಾವಣೆಯನ್ನು ಬಯಸಿದು,ª ಕಂಡುಬಂದಿದೆ. ಶೇಕಡ 70 ರಷ್ಟು ಜನರು ಬದಲಾವಣೆಯನ್ನು ಬಯಸಿದ್ದು ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪಕ್ಷ ಕಣಕ್ಕಿಳಿಯಲು ತೀರ್ಮಾನಿಸಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನವನ್ನು ಕೈಗೊಂಡಿದ್ದು ಪಕ್ಷವನ್ನು ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರುಗಳನ್ನು ತರಾಟೆಗೆ ತೆಗೆದುಕೊಂಡ ಅವರು ಈ ಎರಡೂ ಪಕ್ಷಗಳು ಸಾಧಿಸಲಾಗದ ಕೆಲಸವನ್ನು ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ ಸಾಧಿಸಿ ತೋರಿಸಿದೆ. ಎರಡೂ ಪಕ್ಷಗಳು ಭ್ರಷ್ಟಾಚಾರವನ್ನು ನಡೆಸುತ್ತಾ ಜನತೆಗೆ ಬರೀ ಪೊಳ್ಳು ಭರವಸೆಯನ್ನು ನೀಡುತ್ತಿವೆ ಎಂದು ದೂರಿದರು. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದು ಆಮ್‌ ಆದ್ಮಿ ಪಕ್ಷದ ಉದ್ದೇಶವಾಗಿದ್ದು, ಹಿರಿಯ ವರಿಷ್ಠರು ಚುನಾವಣಾ ತಂತ್ರಗಳನ್ನು ರೂಪಿಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next