Advertisement

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

03:41 PM Apr 16, 2024 | Team Udayavani |

ಮುಂಬಯಿ: ಬಾಲಿವುಡ್‌ ನಟ ಆಮಿರ್‌ ಖಾನ್‌ ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ವಿಡಿಯೋವೊಂದು ವೈರಲ್‌ ಆದ ಬೆನ್ನಲೇ ಮುಂಬೈ ಪೊಲೀಸರ ಸೈಬರ್ ಕ್ರೈಮ್ ಸೆಲ್‌ ನಲ್ಲಿ ಎಫ್‌ ಐಆರ್‌ ದಾಖಲಿಸಿದ್ದಾರೆ.

Advertisement

ಇತ್ತೀಚೆಗೆ ಆಮಿರ್‌ ಖಾನ್‌ ಅವರು ನಿರ್ದಿಷ್ಟ ರಾಜಕೀಯ ಪಕ್ಷವನ್ನು ಬೆಂಬಲಸಿ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಆಮಿರ್‌ ಖಾನ್‌ ಅವರೇ ಮಾಡಿದ್ದಾರೆ ಎಂದು ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

“ಆಮಿರ್ ಖಾನ್ ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಹಿಂದಿನ ಹಲವು ಚುನಾವಣೆಗಳಲ್ಲಿ ಚುನಾವಣಾ ಆಯೋಗದ ಸಾರ್ವಜನಿಕ ಜಾಗೃತಿ ಅಭಿಯಾನಗಳ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸಿದ್ದಾರೆ. ಅವರು ನಿರ್ದಿಷ್ಟ ರಾಜಕೀಯ ಪಕ್ಷವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇತ್ತೀಚೆಗೆ ವೈರಲ್ ಆಗಿರುವ ವಿಡಿಯೋದಿಂದ ನಾವು ಗಾಬರಿಗೊಂಡಿದ್ದೇವೆ. ಇದು ನಕಲಿ ವಿಡಿಯೋ ಮತ್ತು ಸಂಪೂರ್ಣವಾಗಿ ಸುಳ್ಳು ಎಂದು ಈ ಮೂಲಕ ಸಷ್ಟಪಡಿಸುತ್ತೇವೆ. ಅವರು ಈ ವಿಷಯಕ್ಕೆ ಸಂಬಂಧಿಸಿದ ವಿವಿಧ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಮುಂಬೈ ಪೊಲೀಸರ ಸೈಬರ್ ಕ್ರೈಂ ಸೆಲ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಆಮಿರ್‌ ಖಾನ್‌ ಅವರ ತಂಡ ಪ್ರಕಟಣೆಯಲ್ಲಿ ತಿಳಿಸಿದೆ.

ಅಂತರ್ಜಾಲದಲ್ಲಿ ಹರಿದಾಡುತ್ತಿರುವ ನಕಲಿ ವಿಡಿಯೋದಲ್ಲಿ, ಪ್ರತಿಯೊಬ್ಬ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ರೂ.ಗಳ ಭರವಸೆ ನೀಡಿದ್ದಕ್ಕಾಗಿ ಆಮಿರ್ ಪ್ರಧಾನಿ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದನ್ನು ತೋರಿಸಲಾಗಿದೆ.

ನಕಲಿ ವಿಡಿಯೋ ಮಾಡಿದ ಮತ್ತು ಹಂಚಿಕೊಂಡವರ ಮೇಲೆ ಸೈಬರ್ ಕ್ರೈಂ ಸೆಲ್ ಇನ್ನಷ್ಟೇ ಕ್ರಮಕೈಗೊಳ್ಳಬೇಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next