Advertisement

ಆರ್‌ಆರ್‌ಆರ್‌ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್‌ ನಟ ಆಮಿರ್‌ ಖಾನ್‌

09:07 PM Mar 21, 2022 | Team Udayavani |

ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

Advertisement

ಆ ಹಿನ್ನೆಲೆ ಭಾನುವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆರ್‌ಆರ್‌ಆರ್‌ನ ಪ್ರಚಾರ ಕಾರ್ಯಕ್ರಮ ನಡೆಸಲಾಗಿದೆ.

ಆ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಬಾಲಿವುಡ್‌ ನಟ ಆಮಿರ್‌ ಖಾನ್‌ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿನಿಮಾದ “ನಾಟು ನಾಟು’ ಹಾಡಿಗೆ ಜೂನಿಯರ್‌ ಎನ್‌ಟಿಆರ್‌, ರಾಮ್‌ ಚರಣ್‌, ನಟಿ ಆಲಿಯಾ ಭಟ್‌ ಮತ್ತು ಆಮಿರ್‌ ಖಾನ್‌ ಹೆಜ್ಜೆ ಹಾಕಿದ್ದಾರೆ. ಆ ವಿಡಿಯೋ ಎಲ್ಲೆಡೆ ಹರಿದಾಡಿದ್ದು, ಭಾರೀ ವೈರಲ್‌ ಆಗಿದೆ. ಆರ್‌ಆರ್‌ಆರ್‌ ಸಿನಿಮಾ ಮಾ.25ರಂದು ಬಿಡುಗಡೆಯಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next